ಹುಬ್ಬಳ್ಳಿ: ನಾನು ಯಾವುದೇ ಸ್ಥಾನದ ನಿರೀಕ್ಷೆ ಪಡಲ್ಲಾ, ಪಕ್ಷ ಯಾವ ಜವಾಬ್ದಾರಿ ವಹಿಸುವುದೋ ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಮಾಡುವ ವಿಚಾರ ಮುಖ್ಯಮಂತ್ರಿಗಳಿಗೆ ಬಿಟ್ಟ ವಿಭಾಗವಾಗಿದ್ದು, ಆ ಬಗ್ಗೆ ಚರ್ಚಿಸಲು ನಾಳೆ ಅಥವಾ ನಾಡಿದ್ದು ಸಿಎಂ ಬಿ.ಎಸ್.ಯಡಿಯೂರಪ್ಪ ದೆಹಲಿಗೆ ತೆರಳಿದ್ದಾರೆ. ಹೈಕಮಾಂಡ್ ನ ನಿರ್ದೇಶನದಂತೆ ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದು, ಡಿಸಿಎಂ ಸ್ಥಾನ ನೇಮಕ ಮಾಡುವ ವಿಚಾರ ಕೂಡಾ ಹೈಕಮಾಂಡ್ ಗೆ ಬಿಟ್ಟದ್ದು ಅದಕ್ಕೆ ಸಿಎಂ ಉತ್ತರ ಕೊಡಲಿದ್ದಾರೆ ಎಂದರು.ಉತ್ತರ ಕರ್ನಾಟಕ ಭಾಗದವರಿಗೆ ಸಚಿವ ಸ್ಥಾನ ನೀಡುವ ವಿಚಾರ ಸಿಎಂ ವಿವೇಚನೆಗೆ ಬಿಟ್ಟಿದ್ದು, ಅಷ್ಟಕ್ಕೂ ಬಿಜೆಪಿ ಸರ್ಕಾರದಲ್ಲಿ ಉತ್ತರ ಕರ್ನಾಟಕ ದಕ್ಷಿಣ ಕರ್ನಾಟಕ ಎಂಬ ಭೇದಭಾವವಿಲ್ಲಾ, ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಬಿಜೆಪಿ ಶ್ರಮಿಸಲಿದೆ. ಈಗಾಗಲೇ ಉತ್ತರ ಕರ್ನಾಟಕ ಭಾಗದಲ್ಲಿನ ನೆರೆ ಹಾವಳಿ ಕುರಿತು ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಪ್ರವಾಹ ಪೀಡಿತ ಪ್ರದೇಶಗಳ ಜನರಿಗೆ ಸರ್ಕಾರ ಸ್ಪಂದಿಸಲಿದೆ ಎಂದರು.ಅತೃಪ್ತ ಶಾಸಕರೊಂದಿಗೆ ಬಿಜೆಪಿಯ ನಾಯಕರು ಮಾತನಾಡಿದ್ದಾರೆ ನಿಜಾ ಆದರೆ ಅವರೊಂದಿಗೆ ಸಂಪರ್ಕದಲ್ಲಿದ್ದಾರೆ ಎನ್ನುವುದಕ್ಕೆ ಹೇಳಲಾಗುವುದಿಲ್ಲ. ಅತೃಪ್ತರು ಸ್ವತಂತ್ರವಾಗಿ ನಿರ್ಧಾರ ತೆಗೆದುಕೊಳ್ಳಲು ಸಮರ್ಥರಿದ್ದು, ಹೊಸ ಪಕ್ಷವನ್ನು ಹುಟ್ಟು ಹಾಕಲೂ ಬಹುದು ಎಂದರು.ಮಾಜಿ ಸಿಎಂ ಕುಮಾರಸ್ವಾಮಿ ಅವರ ರಾಜಕೀಯ ನಿವೃತ್ತಿಯ ಬಗ್ಗೆ ಪ್ರಕ್ರಿಯೆ ನೀಡಿದ ಅವರು, ಮಾಜಿ ಪ್ರಧಾನಿ ದೇವೆಗೌಡ ಆ್ಯಂಡ ಕಂಪನಿಯ ಹೇಳಿಕೆಗಳನ್ನು ಯಾವುದೇ ರೀತಿ ಸೀರಿಯಸ್ ಆಗಿ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ವ್ಯಂಗ್ಯವಾಡಿದರು
bigtvnews | Hubli Dharwad News | Kannada News | Karnataka News Hubli News | News In Hubli | Local news





