ಚಿಕ್ಕೋಡಿ: ಬೆಳಗಾವಿಯಲ್ಲಿ ಮುಂದುವರಿದ ಮಳೆರಾಯನ ಅಬ್ಬರದಿಂದಾಗಿ ಚಿಕ್ಕೋಡಿ ಭಾಗದ ಕೃಷ್ಣ ನದಿ ದೂದಗಂಗಾ ವೇದಗಂಗಾ ನದಿಗಳ ಒಳಹರಿವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಮುಂಜಾಗ್ರತಾ ಕ್ರಮವಾಗಿ ಸುರಕ್ಷಿತ ಸ್ಥಳಕ್ಕೆ ತೆರಳುತ್ತಿದ್ದಾರೆ.ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಜುಗೋಳ & ಮಂಗಾವತಿ ಗ್ರಾಮಸ್ಥರು ಮನೆ ಸಾಮಗ್ರಿ ಮತ್ತು ದನ ಕರುಗಳನ್ನು ಸ್ಥಳಾಂತರ ಮಾಡಿದ್ದಾರೆ.ಇನ್ನೂ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಮಹಾರಾಷ್ಟ್ರ ಡ್ಯಾಮ್ ನಿಂದ ನೀರು ಹೊರಬಿಡುವ ಸಾಧ್ಯತೆ ಹೆಚ್ಚಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





