ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕುಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು,ಪುತ್ತೂರು, ಕಡಬ, ಬೆಳ್ತಂಗಡಿ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ.ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ಒಂದು ದಿನದ ರಜೆ ನೀಡಲಾಗಿದೆ.ಪದವಿ ಮತ್ತು ನಂತರದ ತರಗತಿಗಳು ಎಂದಿನಂತೆ ನಡೆಯಲಿವೆ . ಬಂಟ್ವಾಳ ತಾಲ್ಲೂಕಿನ ಶಾಲೆ, ಅಂಗನವಾಡಿಗಳಿಗೆ ಮಾತ್ರ ರಜೆಸುಳ್ಯ ತಾಲ್ಲೂಕಿನ ಶಾಲೆ, ಅಂಗನವಾಡಿ ಗಳಿಗೆ ಇಂದು ರಜೆ ಘೋಷಣೆಯಾಗಿದೆ.ಮಂಗಳೂರಿನ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ ಎಂದು ತಿಳಿದು ಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





