Breaking News

ಡೆಂಗ್ಯೂ ಜ್ವರಕ್ಕೆ ಅಗಸರಹಳ್ಳಿ ಗ್ರಾಮದ ಶಾಲಾ ಬಾಲಕಿ ಸಾವು ಮತ್ತೊಬ್ಬ ಬಾಲಕಿ ಅಸ್ವಸ್ಥ

ಮಂಡ್ಯ: ಜಿಲ್ಲೆಯ ಅಗಸರಹಳ್ಳಿ ಗ್ರಾಮದ ರವಿಕುಮಾರ್ ರಾಣಿ ದಂಪತಿಗಳ ಪುತ್ರಿ ಕೆ.ಆರ್.ಪೇಟೆ ಪಟ್ಟಣದ ಪ್ರಿಯದರ್ಶಿನಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಹೇಮಾವತಿ(7) ಮೃತ ದುರ್ದೈವಿಯಾಗಿದ್ದಾರೆ.ಈಕೆಯ ಸಹೋದರಿ ಪ್ರೇರಣ(5)ಕೂಡ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದು ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಜೆಎಸ್ ಎಸ್ ಆಸ್ಪತ್ರೆಯಲ್ಲಿ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಹೇಮಾವತಿ ಮತ್ತು ಪ್ರೇರಣಾ ಸಹೋದರಿಯರು ಚಿಕಿತ್ಸೆ ಪಡೆಯುತ್ತಿದ್ದರು.ವೈದ್ಯರ ಸಲಹೆ ಮೇರೆಗೆ ಅಪೋಲೋ ಆಸ್ಪತ್ರೆಯಲ್ಲಿ ಸ್ಥಳಾಂತರಿಸಿ ಚಿಕಿತ್ಸೆ ಪಡೆಯುತ್ತಿದ್ದರು.ಇಂದು ಮುಂಜಾನೆ ಹೇಮಾವತಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾದರೆ ಈಕೆಯ ಸಹೋದರಿ ತೀವ್ರವಾಗಿ ಅಸ್ವಸ್ಥರಾಗಿದ್ದು ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದಾರೆ. ಅಗಸರಹಳ್ಳಿ ಗ್ರಾಮದಲ್ಲಿ ಆತಂಕವು ಮನೆ ಮಾಡಿದೆ.

Share News

About admin

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *