ಧಾರವಾಡ : ಧಾರವಾಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ಮತ್ತು ಹಿತದೃಷ್ಟಿಯೊಂದಿಗೆ ಇಂದು ಆಗಸ್ಟ್ 06 ಹಾಗೂ ನಾಳೆ ಆಗಸ್ಟ್ 07 ರಂದು ಎರಡು ದಿನಗಳ ಕಾಲ ಜಿಲ್ಲೆಯ ಎಲ್ಲಾ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದೀಪಾ ಚೋಳನ್ ಆದೇಶ ಹೊರಡಿಸಿದ್ದಾರೆ.ಈ ಎರಡು ರಜಾ ದಿನಗಳನ್ನು ಮುಂಬರುವ ರವಿವಾರ ದಿನಗಳಂದು ಕರ್ತವ್ಯ ನಿರ್ವಹಿಸಿ ಅವಧಿಗಳನ್ನು ಸರಿದೂಗಿಸಿಕೊಳ್ಳಲು ಅವರು ಸೂಚಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





