ಹುಬ್ಬಳ್ಳಿ: ಕಳೆದ ಕೆಲ ದಿನಗಳಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯ ಆರ್ಭಟಕ್ಕೆ ಜನರು ತತ್ತರಿಸುತ್ತಿದ್ದಾರೆ.ಈ ಹಿನ್ನೆಲೆಯಲ್ಲಿ
ತಾಲೂಕಿನ ಅಲ್ಲಾಪುರ, ಗುಡೇನಕಟ್ಟಿ ಭಾಗದಲ್ಲಿ ಅಧಿಕ ಹಾನಿ ಉಂಟಾಗಿದೆ.
ಮಳೆಯ ರಭಸಕ್ಕೆ ಕುಂದಗೋಳ ತಾಲೂಕಿನಲ್ಲಿ ನಿಂಗಪ್ಪ ಮಡಿವಾಳರ ಎಂಬುವವರಿಗೆ ಸೇರಿದ ಮನೆ ಕುಸಿತಗೊಂಡಿದೆ. ಇದರಿಂದ ಲಕ್ಷಾಂತರ ರೂಪಾಯಿ ಹಾನಿಯಾಗಿದೆ.
ಅದೃಷ್ಟವಶಾತ್ ಪ್ರಾಣ ಹಾನಿ ಸಂಭವಿಸಿಲ್ಲ.
ಅಷ್ಟೇ ಅಲ್ಲದೇ ಗುಡೇನಕಟ್ಟಿ ಭಾಗದಲ್ಲಿ ಜಮೀನಿಗೆ ಮಳೆ ನುಗ್ಗಿದ ನೀರು ನುಗ್ಗಿದ ಪರಿಣಾಮ
ಕೃಷಿ ಭೂಮಿಯು ಸಂಪೂರ್ಣ ಕೆರೆಯಾಗಿ ಮಾರ್ಪಟ್ಟಿದೆ. ಹಾಗೂ ಶೇಂಗಾ ಬೆಳೆ ಸಂಪೂರ್ಣ ಹಾಳಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





