ಕೃಷ್ಣಾ ನೀರಿನ ಒಳಹರಿವು ಇನ್ನೂ ಹೆಚ್ಚಳ ಸಾಧ್ಯತೆ ಸುರಕ್ಷಿತ ಸ್ಥಳಕ್ಕೆ ತೆರಳಲು ಜಿಲ್ಲಾಧಿಕಾರಿ ಮನವಿ

ಬೆಳಗಾವಿ: ನೆರೆಯ ಮಹಾರಾಷ್ಟ್ರ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಕೃಷ್ಣಾ ನದಿಯಲ್ಲಿ ಒಳಹರಿವು ಹೆಚ್ಚಾಗಿದೆ. ಕೃಷ್ಣಾ ಮತ್ತು ಘಟಪ್ರಭಾ ನದಿಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ನದಿ ದಂಡೆಯ ಗ್ರಾಮಸ್ಥರು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಮನವಿ ಮಾಡಿಕೊಂಡಿದ್ದಾರೆ.ಮಹಾರಾಷ್ಟ್ರದ ಜಲಾಶಯದಿಂದ ಕೃಷ್ಣಾ ನದಿಗೆಇಂದು ಬೆಳಿಗ್ಗೆ 8 ಗಂಟೆಯವರೆಗೆ 3 ಲಕ್ಷ ಕ್ಯೂಸೆಕ್ ನೀರು ಹರಿಬಿಡಲಾಗಿದೆ. ಇದು 4 ಲಕ್ಷ ಕ್ಯೂಸೆಕ್ ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.ಹಿಡಕಲ್ ಜಲಾಶಯ ಕೂಡ ಭರ್ತಿಯಾಗಿದ್ದು, ಒಂದು ಲಕ್ಷ ಕ್ಯೂಸೆಕ್ ಒಳಹರಿವು ಇದೆ‌. ಅದೇ ಪ್ರಮಾಣದಲ್ಲಿ ನೀರನ್ನು ಜಲಾಶಯದಿಂದ ಬಿಡುಗಡೆ ಮಾಡಲಾಗುತ್ತಿದೆ.ಆದ್ದರಿಂದ ಕೃಷ್ಣಾ ಮತ್ತು ಘಟಪ್ರಭಾ ನದಿಪಾತ್ರದ ಜನರು ಆದಷ್ಟು ಬೇಗನೇ ಸುರಕ್ಷಿತ ಸ್ಥಳಕ್ಕೆ ತೆರಳಬೇಕು. ಸೇನೆ, ಪೊಲೀಸ್, ಅಗ್ನಿಶಾಮಕ ದಳ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಅನೇಕ ತಂಡಗಳು ಜನರು ಮತ್ತು ಜಾನುವಾರುಗಳನ್ನು ಸ್ಥಳಾಂತರಿಸುವ ಕಾರ್ಯದಲ್ಲಿ ತೊಡಗಿರುತ್ತಾರೆ.ಜಲಾವೃತಗೊಂಡಿರುವ ಗ್ರಾಮಗಳಲ್ಲಿ ಉಳಿದುಕೊಂಡಿರುವ ಜನ ಮತ್ತು ಜಾನುವಾರುಗಳನ್ನು ಸ್ಥಳಾಂತರಿಸುವ ಕೆಲಸ ನಿರಂತರವಾಗಿ ನಡೆದಿದೆ. ಆದಾಗ್ಯೂ ಯಾರಾದರೂ ಅಪಾಯದಲ್ಲಿ ಸಿಲುಕಿದ್ದರೆ ತಕ್ಷಣವೇ ಜಿಲ್ಲಾಧಿಕಾರಿ ಕಾರ್ಯಾಲಯ, ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಹಾಗೂ ವಿವಿಧ ತಾಲ್ಲೂಕು ಕೇಂದ್ರಗಳಲ್ಲಿ ಸ್ಥಾಪಿಸಲಾಗಿರುವ ಈ ಕೆಳಕಂಡ ಸಹಾಯ ವಾಣಿ ಕೇಂದ್ರಗಳಿಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಕೋರಿದ್ದಾರೆ.2005-06 ನೇ ಸಾಲಿನಲ್ಲಿ ಎದುರಾಗಿದ್ದ ಪ್ರವಾಹ ಪರಿಸ್ಥಿತಿ ಪುನಾರವರ್ತನೆಯಾಗುವ ಸಾಧ್ಯತೆಗಳಿರುವುದರಿಂದ ನದಿಪಾತ್ರದ ಜನರು ಗರಿಷ್ಠಮಟ್ಟದ ಎಚ್ಚರಿಕೆ ವಹಿಸಬೇಕು. ಯಾವುದೇ ಕಾರಣಕ್ಕೂ ಹರಿಯುತ್ತಿರುವ ನೀರಿನಲ್ಲಿ ಈಜಲು ಅಥವಾ ದಾಟಲು ಪ್ರಯತ್ನಿಸಬಾರದು. ಅಂತಹ ಸಂದರ್ಭಗಳಲ್ಲಿ ಸಹಾಯವಾಣಿ ಕೇಂದ್ರಕ್ಕೆ ಮಾಹಿತಿ ನೀಡಿದರೆ ಕೂಡಲೇ ರಕ್ಷಣಾ ತಂಡಗಳನ್ನು ಕಳುಹಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.ಸಹಾಯವಾಣಿ/ನಿಯಂತ್ರಣ ಕೊಠಡಿ ಸಂಖ್ಯೆ:ಜಿಲ್ಲಾಧಿಕಾರಿ ಕಚೇರಿ- 0831-2407290; ಪೊಲೀಸ್ ವರಿಷ್ಠಾಧಿಕಾರಿ ಕಚೇರಿ-0831-2405231; ಚಿಕ್ಕೋಡಿ-08338-272228; ರಾಯಬಾಗ: 08331-225482; ಅಥಣಿ: 08289-251146; ನಿಪ್ಪಾಣಿ: 08338-220395***

Share News

About admin

Check Also

ರಾಯಚೂರು ಜಿಲ್ಲೆಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ

ರಾಯಚೂರು: ಅಪೌಷ್ಟಿಕತೆಯಿಂದ ಬಳಲುತ್ತಿದ್ದ ಜಿಲ್ಲೆ ಈಗ ಪೌಷ್ಟಿಕ ವಿಚಾರದಲ್ಲಿ ಪ್ರಗತಿ ಸಾಧಿಸುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ವಿಡಿಯೋ ಕಾನ್ಫರೆನ್ಸ್‌ …

Leave a Reply

Your email address will not be published. Required fields are marked *

You cannot copy content of this page