Breaking News

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಡಿಸಿ ಸಸಿಕಾಂತ್ ಸೆಂಥಿಲ್‌

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಾರೀ ಮಳೆಯಾಗುತ್ತಿದ್ದು, ಮುಂದಿನ ಎರಡು ದಿನ ಮಳೆ ಮತ್ತಷ್ಟು ತೀವ್ರಗೊಳ್ಳಲಿರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ – ಕಾಲೇಜುಗಳ ಪದವಿ ತರಗತಿವರೆಗೆ ರಜೆ ಘೋಷಿಸಿಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್‌ ಆದೇಶ ನೀಡಿದ್ದಾರೆ. ತಗ್ಗು ಇರುವ ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗೃತೆ ವಹಿಸುವಂತೆಯೂ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಮೀನುಗಾರರು ಮುಂದಿನ ಮೂರು ದಿನಗಳವರೆಗೆ ಕಡ್ಡಾಯವಾಗಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿಯಬಾರದು. ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದ್ದು. ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ದೂರುಗಳಿಗೆ ಸ್ಪಂದಿಸಬೇಕು ಎಂದು ಅವರು ಆದೇಶಿಸಿದ್ದಾರೆ.ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿ ತೀರ, ಸಮುದ್ರ ತೀರಕ್ಕೆ ತೆರಳದಂತೆ ಎಚ್ಚರಿ ವಹಿಸುವಂತೆಯೂ ಅವರು ಸೂಚಿಸಿದ್ದಾರೆ. ನಾಳೆಯಿಂದ ಮೂರು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

Share News

About admin

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *