ಬೆಳಗಾವಿ: ನಿರಂತರ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪುಣಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಗಳು ಬಂದ್ ಆಗಿವೆ.ಜತ್ತ-ಜಾಂಬೋಟಿ ರಾಜ್ಯ ಹೆದ್ದಾರಿ, ಸಂಕೇಶ್ವರ-ಜೇವರ್ಗಿ ರಾಜ್ಯ ಹೆದ್ದಾರಿಗಳು, ಬಾಗಲಕೋಟ ಮಹಾರಾಷ್ಟ್ರ ಸಂಪರ್ಕಿಸುವ ರಾಯಭಾಗ ತಾಲೂಕಿನ ಕುಡಚಿ ರಾಜ್ಯ ಹೆದ್ದಾರಿಗಳು ಬಂದ್ ಆಗಿದೆ.ಅಲ್ಲದೇ ಮಳೆ ಪರಿಣಾಮವಾಗಿ ಜತ್ತ-ಜಾಂಬೋಟಿ ರಾಜ್ಯ ಹೆದ್ದಾರಿಯ ಅಥಣಿ ತಾಲೂಕಿನ ದರೂರ ಸೇತುವೆ ಸಂಪೂರ್ಣ ಮುಳುಗಡೆಯಾಗಿವೆ. ಅಥಣಿ ತಾಲೂಕಿನ ದರೂರ ಸೇತುವೆ ಮುಳುಗಡೆ ಹಿನ್ನೆಲೆಯಲ್ಲಿ ಬಿಗಿ ಪೋಲಿಸ್ ಬಂದೋಬಸ್ತ ನೀಡಲಾಗಿದ್ದು, ಪೋಲಿಸ್ ಸಿಬ್ಬಂದಿ ಬ್ಯಾರಿಕೇಡ್ ಹಾಕಿ ಹಗಲು ರಾತ್ರಿ ಕಾವಲು ಕಾಯುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





