Breaking News

ಸುರಿವ ಮಳೆಯಲ್ಲಿಯೂ ಸಂತ್ರಸ್ಥರನ್ನು ಭೇಟಿ ಮಾಡಿ ಸಂತೈಸಿದ ಶಾಸಕಿ ಲಕ್ಷ್ಮೀಹೆಬ್ಬಾಳ್ಕರ್

ಬೆಳಗಾವಿ: ಇಲ್ಲಿನ ಗ್ರಾಮೀಣ ಭಾಗದಲ್ಲಿ ಮಳೆ ನಿರಂತರ ಸುರಿಯುತ್ತಿರುವ ಕಾರಣ ಬಹುಭಾಗದಲ್ಲಿ ನೀರು ನಿಂತು ಜನಜೀವನ ಅಸ್ಥವ್ಯಸ್ಥವಾಗಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಶಾಸಕಿ ಲಕ್ಷ್ಮೀಹೆಬ್ಬಾಳ್ಕರ್ ರವರು ಇಂದು ಜಲಾವೃತಗೊಂಡ ಸ್ಥಳಗಳನ್ನು ಖುದ್ದು ಪರಿಶೀಲಿಸಿದರು. ಮತ್ತು ಅಗತ್ಯ ಸ್ಥಳಗಳಲ್ಲಿ ಗಂಜೀಕೇಂದ್ರಗಳನ್ನು ತೆರೆಯುವಂತೆ ಹಾಗೂ ತಾತ್ಕಾಲಿಕ ಪುನವ೯ಸತಿ ಕಲ್ಪಿಸುವಂತೆ ತಾಲೂಕು ಆಡಳಿತಾಧಿಕಾರಿಗಳಿಗೆ ಸೂಚಿಸಿದರು. ಸ್ಥಳೀಯ ಆಡಳಿತಾಧಿಕಾರಿಗಳು ಹಾಗೂ ತಾಲೂಕು ಆಡಳಿತಾಧಿಕಾರಿಗಳೊಂದಿಗೆ ತೆರಳಿ ನೆರೆ ಸಂತ್ರಸ್ಥರನ್ನು ಖುದ್ದು ಭೇಟಿಯಾದ ಶಾಸಕಿ ಲಕ್ಷ್ಮೀಹೆಬ್ಬಾಳಕರ್ ರವರು ನಿರಂತರ ಸುರಿಯುತ್ತಿರುವ ಮಳೆಯಲ್ಲಿಯೂ ಮಳೆಯಿಂದ ಜಲಾವೃತಗೊಂಡ ಕುಟುಂಬಗಳನ್ನು ಕಾಯ೯ಕತ೯ರೊಂದಿಗೆ ಹಾಗೂ ವಿವಿದ ಅಧಿಕಾರಿಗಳೊಂದಿಗೆ ಬೆಟ್ಟಿಕೊಟ್ಟು ಅವರನ್ನು ಸಂತೈಸಿದರು ಮತ್ತು ಮೂಲಭೂತ ಸೌಕಯ೯ಗಳನ್ನು ಸಂತ್ರಸ್ಥರಿಗೆ ಕೂಡಲೇ ವದಗಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ಅವರ ಕಾಳಜಿ ಹಾಗೂ ಕಥ೯ವ್ಯ ಪ್ರಜ್ಗ್ನೆಗೆ ಸಾವ೯ಜನಿಕ ವಲಯದಿಂದ ಭಾರೀ ಪ್ರಶಂಸೆ ವ್ಯಕ್ತವಾಗಿದೆ.
ವಿ.ಜಿ.ವೃಷಭೇಂದ್ರ ಕೂಡ್ಲಿಗಿ-9008937428.

Share News

About admin

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *