ಬೆಳಗಾವಿ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆ ಹಿನ್ನೆಲೆಯಲ್ಲಿಬೆಂಗಳೂರಿನಿಂದ ಬೆಳಗಾವಿ ಮಾರ್ಗವಾಗಿ ಪುಣೆಗೆ ಸಂಪರ್ಕಿಸುತ್ತಿದ್ದ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಭಾರಿ ಪ್ರಮಾಣದ ಭೂಕುಸಿತ ಉಂಟಾಗಿದೆ. ಇದರಿಂದ ಪುಣೆ ಬೆಂಗಳೂರು ರಸ್ತೆ ಸಂಪರ್ಕ ಕಡಿತಗೊಂಡಿದೆ. ಈ ಪರಿಣಾಮನಾಳೆ ಮಧ್ಯಾಹ್ನದ ವರೆಗೂ ರಸ್ತೆ ಸಂಚಾರ ಸ್ಥಗಿತಗೊಳಿಸಲು ಸೂಚಿಸಲಾಗಿದೆ.ಬೆಳಗಾವಿಯಿಂದ ಕೊಲ್ಲಾಪುರ ಕಡೆಗೆ ಯಾರು ಪ್ರಯಾಣ ಮಾಡದಂತೆ ಉತ್ತರ ಐಜಿಪಿ ರಾಘವೇಂದ್ರ ಸುಹಾಸ್ ಮನವಿ ಮಾಡಿದರು.ಬೆಳಗಾವಿ ಪೊಲೀಸರು ರಾಜ್ಯದ ಗಡಿಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





