Breaking News

ಸುಭದ್ರ ರಾಷ್ಟ್ರದ ನಿರ್ಮಾಣಕ್ಕೆ ಇಂಜಿನಿಯರಿಂಗ್ ಶಿಕ್ಷಣ ವರದಾನ

ಮಂಡ್ಯ: ಸುಭದ್ರ ರಾಷ್ಟದ ನಿರ್ಮಾಣಕ್ಕೆ ತಾಂತ್ರಿಕ ಶಿಕ್ಷಣವು ವರದಾನವಾಗಿದೆ. ವಿದ್ಯಾರ್ಥಿಗಳು ಏಕಾಗ್ರತೆ ಹಾಗೂ ಶ್ರದ್ಧೆ ಆಸಕ್ತಿಯಿಂದ ವ್ಯಾಸಂಗ ಮಾಡಿ ನಾಡಿನ ಶ್ರೇಷ್ಠ ಎಂಜಿನಿಯರುಗಳಾಗಿ ಹೊರಹೊಮ್ಮಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿಶೇಷಾಧಿಕಾರಿ ಎಸ್.ಸಿ.ಅರವಿಂದ್ ಅವರು ತಿಳಿಸಿದರು.
ಇಂದು ಮಂಡ್ಯ ಜಿಲ್ಲೆ ಮಂಡ್ಯ ಪಟ್ಟಣದ ಕೆ.ಆರ್. ಪೇಟೆಯಲ್ಲಿ ಆಯೋಜಿಸಲಾದ
ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಪ್ರಥಮವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯುವ ಎಂಜಿನಿಯರುಗಳು ತಮ್ಮಲ್ಲಿನ ತಾಂತ್ರಿಕ ಕೌಶಲ್ಯವನ್ನು ಸದ್ಬಳಕೆ ಮಾಡಿಕೊಂಡು ನೂರಾರು ಯುವಜನರಿಗೆ ಉದ್ಯೋಗವನ್ನು ನೀಡುವ ಉದ್ಯೋಗಧಾತರಾಗಿ ಹೊರಹೊಮ್ಮಬೇಕು ಎಂದು ಮನವಿ ಮಾಡಿದ ಅರವಿಂದ್ ಯುವಜನರು ಮೊಬೈಲ್ ಬಳಕೆ ಮಾಡಿ ವ್ಯಾಟ್ಸಫ್, ಫೇಸ್ ಬುಕ್ ಚಾಟಿಂಗ್ ಮಾಡಿಕೊಂಡು ತಮ್ಮ ಅಮೂಲ್ಯವಾದ ಸಮಯವನ್ನು ವ್ಯರ್ಥಮಾಡಿಕೊಳ್ಳದೇ ಲೋಕಜ್ಞಾನವನ್ನು ತಿಳಿದುಕೊಂಡು ಸರ್ವಶ್ರೇಷ್ಠ ಸಾಧನೆ ಮಾಡಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡಬೇಕು ಎಂದು ಶುಭ ಹಾರೈಸಿದರು.ಪಟ್ಟಣ ಪೋಲಿಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಹೆಚ್.ಎಸ್.ವೆಂಕಟೇಶ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳನ್ನು ಗೋಳುಹೊಯ್ದುಕೊಳ್ಳುವುದು, ಕೀಟಲೆ ಮಾಡಿ ತೊಂದರೆ ಕೊಟ್ಟರೆ ಪೋಲಿಸರ ಗಮನಕ್ಕೆ ತರಬೇಕು. ಅಂತಹ ವಿದ್ಯಾರ್ಥಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ನಾಗರಘಟ್ಟ ಡಾ.ಸತೀಶ್ ವಹಿಸಿದ್ದರು. ಸಿವಿಲ್ ವಿಭಾಗದ ಮುಖ್ಯಸ್ಥ ಡಾ.ರಮೇಶ್, ಮೆಕ್ಯಾನಿಕಲ್ ವಿಭಾಗದ ಡಾ.ಟಿ.ರಮೇಶ್, ಕಂಪ್ಯೂಟರ್ ಸೈನ್ಸ್ ವಿಭಾಗದ ಡಾ.ಜಿ.ವಸಂತ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗದ ಡಾ.ರುದ್ರಪ್ಪ, ದೈಹಿಕ ಶಿಕ್ಷಣ ನಿರ್ದೇಶಕ ಶ್ರೀನಿವಾಸಮೂರ್ತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಸಹಪ್ರಾಧ್ಯಾಪಕರಾದ ಪುಷ್ಪಾವತಿ ಪ್ರಾರ್ಥಿಸಿದರು, ಡಾ.ರುದ್ರೇಶ್ ಸ್ವಾಗತಿಸಿದರು, ಡಾ.ಶಿವಶಂಕರ್ ಕಾರ್ಯಕ್ರಮ ನಿರೂಪಿಸಿದರು, ಲಲಿತಾ ವಂದಿಸಿದರು.
ನೂತನ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದ ಅಂಗವಾಗಿ ಕಾಲೇಜಿನಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *