Breaking News

ಯುವಜನತೆ ದೇಶಪ್ರೇಮ ಹಾಗೂ ಸಮಾಜಮುಖಿ ಕೆಲಸದಲ್ಲಿ ತೊಡಗಲು ಕರೆ

ಮಂಡ್ಯ: ವಿದ್ಯಾರ್ಥಿಗಳು ಹಾಗೂ ಯುವಜನರು ದೇಶಪ್ರೇಮವನ್ನು ಬೆಳೆಸಿಕೊಂಡು ಸಮಾಜಮುಖಿಯಾಗಿ ಮುನ್ನಡೆಯಬೇಕು. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿ ಹುತಾತ್ಮರಾದ ಹಿರಿಯರ ಜೀವನದ ಆದರ್ಶಗಳನ್ನು ಮೈಗೂಡಿಸಿಕೊಂಡು ಗುರಿಸಾಧನೆಯತ್ತ ಹೆಜ್ಜೆ ಹಾಕಲು ಡಾ.ಟಿ.ಸಿ.ಪೂರ್ಣಿಮಾ ಕರೆ ನೀಡಿದರು.
ಮಂಡ್ಯ ಜಿಲ್ಲೆ ವ್ಯಾಪ್ತಿಯ ಮಂಡ್ಯ ಹೊಸಹೊಳಲು ಗ್ರಾಮದ ಎಸ್.ಎಲ್.ಎನ್ ಸಮುದಾಯ ಭವನದಲ್ಲಿ ಮೈಸೂರಿನ ಕ್ಷೇತ್ರ ಜನಸಂಪರ್ಕ ಕಾರ್ಯಾಲಯ, ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ, ಪುರಸಭೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಕ್ವಿಟ್ ಇಂಡಿಯಾ ಒಂದು ಸ್ಮರಣೆ ವಿಶೇಷ ಚಿಂತನ ಮಂಥನ ಕಾರ್ಯಕ್ರಮ ನಡೆಯಿತು. ಅರುಣೋದಯ ಕಲಾತಂಡದ ಕಲಾವಿದರು ಮಕ್ಕಳು ಹಾಗೂ ಯುವಜನರಲ್ಲಿ ದೇಶಭಕ್ತಿಯನ್ನು ಮೂಡಿಸುವ, ಕ್ವಿಟ್ ಇಂಡಿಯಾ ಚಳವಳಿಯ ಬಗ್ಗೆ ಅರಿವು ಮೂಡಿಸುವ ರೂಪಕವನ್ನು ಪ್ರದರ್ಶಿಸಿ ರಾಷ್ಟ್ರಪಿತ ಮಹಾತ್ಮಗಾಂಧಿ ಅವರ ಹೋರಾಟ, ವಂದೇಮಾತರಂ ಘೋಷವಾಕ್ಯದ ಕುರಿತು ಸಂಚಲನ ಮೂಡಿಸಿದರು.ಮೈಸೂರಿನ ಕ್ಷೇತ್ರ ಜನಸಂಪರ್ಕ ಕಾರ್ಯಾಲಯದ ಉಪನಿರ್ದೇಶಕರಾದ
ಡಾ.ಟಿ.ಸಿ.ಪೂರ್ಣಿಮಾ ಅವರು ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿ ಇಂದಿನ ಯುವಜನರು ಮತ್ತು ವಿದ್ಯಾರ್ಥಿಗಳು ಪಾಶ್ಚಾತ್ಯ ಸಂಸ್ಕೃತಿಯ ಮೋಹಕ್ಕೆ ಒಳಗಾಗಿ ನಮ್ಮ ದೇಶದ ಇತಿಹಾಸ ಸಂಸ್ಕೃತಿ ಹಾಗೂ ಪರಂಪರೆಯನ್ನು ಮರೆಯುತ್ತಿದ್ದಾರೆ.
ಈ ಬಗ್ಗೆ ಯುವಜನರಲ್ಲಿ ಅರಿವಿನ ಹಣತೆಯ‌ನ್ನು ಬೆಳಗಲು ಕ್ವಿಟ್ ಇಂಡಿಯಾ ಒಂದು ಸ್ಮರಣೆ ಕಾರ್ಯಕ್ರಮವನ್ನು ಹಮ್ಮಿಕೊಂಡು ಯುವಜನರಲ್ಲಿ ದೇಶಭಕ್ತಿಯ ಬಗ್ಗೆ ಜಾಗೃತಿಯನ್ನು ಮೂಡಿಸಲಾಗುತ್ತಿದೆ. ವಿದ್ಯಾರ್ಥಿಗಳು ಬಾಲ್ಯದಿಂದಲೇ ಉತ್ತಮವಾದ ಸಂಸ್ಕಾರ, ಶಿಸ್ತು ಸಂಯಮವನ್ನು ಬೆಳೆಸಿಕೊಂಡು ಸಮಾಜಮುಖಿಯಾಗಿ ಮುನ್ನಡೆಯಬೇಕು. ಸೇವಾಮನೋಭಾವನೆ, ದೇಶಭಕ್ತಿ ಮತ್ತು ಮಾನವೀಯ ಮೌಲ್ಯಗಳು ಜೀವನದ ಉಸಿರಾಗಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಕ್ಷೇತ್ರಶಿಕ್ಷಣಾಧಿಕಾರಿ ಎಸ್.ರೇವಣ್ಣ, ಪುರಸಭೆಯ ಮುಖ್ಯಾಧಿಕಾರಿ ಸತೀಶ್ ಕುಮಾರ್, ಜನಶಿಕ್ಷಣ ಸಂಸ್ಥೆಯ ನಿರ್ದೇಶಕ ಎ.ಪಿ.ರಮೇಶ್, ಪುರಸಭೆಯ ಸದಸ್ಯರಾದ ಗಾಯತ್ರಿ, ಕಲ್ಪನಾ, ಅಶೋಕ್ ಮತ್ತಿತರರು ಭಾಗವಹಿಸಿದ್ದರು.
ಪುರಸಭೆಯ ಸದಸ್ಯ ಹೆಚ್.ಎನ್.ಪ್ರವೀಣ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಪುಟಾಣಿ ಮಕ್ಕಳು ಸ್ವಾತಂತ್ರ್ಯ ಹೋರಾಟಗಾರರ ವೇಷಭೂಷಣಗಳನ್ನು ಧರಿಸಿಕೊಂಡು ಸಮಾರಂಭಕ್ಕೆ ವಿಶೇಷ ರಂಗು ತಂದಿದ್ದರು.

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *