Breaking News

ಜೋಡಿಕೊಲೆಯ ಪ್ರಮುಖ ಆರೋಪಗಳನ್ನು ಬಂಧಿಸಲು ಆಗ್ರಹಿಸಿ ಪ್ರತಿಭಟನೆ

ಮಂಡ್ಯ: ರಾಯಸಮುದ್ರ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಜೋಡಿ ಕೊಲೆ ಪ್ರಕರಣದಲ್ಲಿ ಓರ್ವ ಆರೋಪಿಯನ್ನು ಬಂಧಿಸಿದ್ದು ಇದರಲ್ಲಿ ಇನ್ನೂ ನಾಲ್ಕಾರು ಜನ ಭಾಗಿಯಾಗಿದ್ದು ಅವರನ್ನು ಸಹ ಬಂಧಿಸಬೇಕೆಂದು ಒತ್ತಾಯಿಸಿ ಗ್ರಾಮಸ್ಥರು ಗ್ರಾಮದ ಸಮುದಾಯ ಭವನದ ಮುಂದೆ ಪ್ರತಿಭಟನೆ ನಡೆಸಿದರು.ಕೂಲಿ ಮಾಡಿಕೊಂಡು ಜೀವನ ನೆಡೆಸುತ್ತಿದ್ದ ಗುಂಡೇಗೌಡ ಮತ್ತು ಲಲಿತಮ್ಮ ದಂಪತಿಗಳಿಬ್ಬರನ್ನು ಓರ್ವ ವ್ಯಕ್ತಿ ಕಟ್ಟಿಗೆಯಿಂದ ಹೊಡೆದು ಸಾಧಿಸಲು ಸಾಧ್ಯವಿಲ್ಲ ಹಾಗಾಗಿ ಪ್ರಕರಣವನ್ನು ಸಮಗ್ರ ತನಿಖೆಗೆ ಒಳ ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಎಲ್ಲಾ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಗ್ರಾಮಸ್ಥರು ಸರ್ಕಲ್ ಇನ್ಸ್ ಪೆಕ್ಟರ್ ಸುಧಾಕರ್ ಅವರನ್ನು ಒತ್ತಾಯ ಮಾಡಿದರು.ಅಲ್ಲದೆ ಕೊಲೆಯಾದ ಗುಂಡೇಗೌಡ ಮತ್ತು ಲಲಿತಮ್ಮ ದಂಪತಿಗಳ ಬಳಿ ಲಕ್ಷಾಂತರ ರೂ ಹಣವಿತ್ತು. ಒಡವೆಗಳು ಸಹ ಇತ್ತು ಈ ಹಣ ಮತ್ತು ಒಡವೆಗಳು ಎಲ್ಲಿದೆ ಎಂಬುದನ್ನು ಪತ್ತೆ ಮಾಡಬೇಕು.ಕೊಲೆ ಆರೋಪದಡಿ ಬಂಧಿತನಾಗಿರುವ ಯೋಗೇಶನೊಂದಿಗೆ ಕೊಲೆಯಾದ ದಂಪತಿಗಳು ವೈಷಮ್ಯ ಇರಲಿಲ್ಲ. ಆದರೆ ಆತ ವೈಷಮ್ಯದಿಂದ ಕೊಲೆ ಮಾಡಿರುವುದಾಗಿ ಹೇಳಿರುವುದು ಹಾಸ್ಯಾಸ್ಪದವಾಗಿದೆ ಎಂದು ಗ್ರಾಮಸ್ಥರು ಪೊಲೀಸ್ ಅಧಿಕಾರಿಗಳನ್ನು ಪ್ರಶ್ನಿಸಿದರು.ಬಂಧಿತ ಆರೋಪಿ ಯೋಗೇಶನ ಪತ್ನಿಯನ್ನು ಬಂಧಿಸಿ ವಿಚಾರಣೆ ಮಾಡಿದರೆ ಕೊಲೆಯಲ್ಲಿ ಭಾಗಿಯಾಗಿರುವ ಇತರ ಆರೋಪಿಗಳ ಪೂರ್ಣ ಬಗ್ಗೆ ಮಾಹಿತಿ ಸಿಗಲಿದೆ ಎಂದು ಗ್ರಾಮದ ಮಹಿಳೆಯರು ಪೋಲೀಸರನ್ನು ಒತ್ತಾಯಿಸಿದರು.ಪ್ರತಿಭಟನೆಯ ವಿಚಾರ ತಿಳಿದು ಗ್ರಾಮಕ್ಕೆ ಆಗಮಿಸಿ ರಾಯಸಮುದ್ರ ಗ್ರಾಮಸ್ಥರ ಮನವಿಯನ್ನು ಆಲಿಸಿದ ಸರ್ಕಲ್ ಇನ್ಸ್ ಪೆಕ್ಟರ್ ಸುಧಾಕರ್ ಅವರು ಪ್ರಕರಣದವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಲಾಗುತ್ತದೆ. ಪ್ರಕರಣವು ಇನ್ನೂ ಕೂಡ ತನಿಖೆಯ ಹಂತದಲ್ಲಿದೆ. ಸದ್ಯಕ್ಕೆ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳನ್ನು ಪತ್ತೆ ಹಚ್ಚುವ ಸಲುವಾಗಿ ತನಿಖೆಯನ್ನು ಮುಂದುವರೆಸಲಾಗಿದೆ.ಪ್ರಕರಣದಲ್ಲಿ ಬೇರೆ ಯಾರಾದರೂ ಭಾಗಿಯಾಗಿದ್ದರೆ ಎಲ್ಲಾ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.ಈ ಸಂದರ್ಭದಲ್ಲಿ ಪಾಲ್ಗೊಂಡಿದ್ದ ಜಿಲ್ಲಾ ಪಂಚಾಯತ್ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಹೆಚ್.ಟಿ.ಮಂಜುನಾಥ್ ಅವರು ಉದ್ರಿಕ್ತಗೊಂಡಿದ್ದ ಗ್ರಾಮಸ್ಥರನ್ನು ಸಮಾಧಾನಪಡಿಸಿ ಜೋಡಿ ಕೊಲೆ ಪ್ರಕರಣದ ಸಮಗ್ರ ತನಿಖೆ ನಡೆಸುವ ಆಶ್ವಾಸನೆಯನ್ನು ಪೊಲೀಸ್ ಅಧಿಕಾರಿಗಳು ನೀಡಿದ್ದಾರೆ ಹಾಗಾಗಿ ಗ್ರಾಮಸ್ಥರು ತನಿಖೆ ಪೂರ್ಣಗೊಳ್ಳುವವರೆಗೆ ಸಮಾಧಾನದಿಂದ ಇರಬೇಕು ಎಂದು ಗ್ರಾಮಸ್ಥರಿಗೆ ಸಲಹೆ ನೀಡಿದರು.ಪ್ರತಿಭಟನೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ದೇವಾನಂದ್ ಸೇರಿದಂತೆ ಸಾವಿರಾರು ಗ್ರಾಮಸ್ಥರು ಭಾಗವಹಿಸಿದ್ದರು.

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *