Breaking News

ಶಾಂತಿ ಭಾವೈಕ್ಯತೆಯಿಂದ ಬಕ್ರೀದ್ ಆಚರಣೆಗೆ ಮನವಿ

ಮಂಡ್ಯ: ಮಂಡ್ಯ ವೃತ್ತದ ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎನ್.ಸುಧಾಕರ್ ಅವರ ಪಟ್ಟಣದ ಕಛೇರಿಯಲ್ಲಿ ಬಕ್ರೀದ್ ಹಬ್ಬದ ಅಂಗವಾಗಿ ಮುಸ್ಲಿಂ ಬಾಂಧವರು ಮತ್ತು ಹಿಂದೂ ಬಂಧುಗಳ ಶಾಂತಿ ಸಮಿತಿ ಸಭೆಯು ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಕೋಮುಸೌಹಾರ್ಧತೆ ಹಾಗೂ ಭಾವೈಕ್ಯತೆಯ ಜೀವನಕ್ಕೆ ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ತಾಲ್ಲೂಕು ರಾಜ್ಯದಲ್ಲಿಯೇ ಮಾದರಿಯಾಗಿದೆ. ಆದ್ದರಿಂದ ಮುಸ್ಲಿಂ ಬಂಧುಗಳು ಪ್ರೀತಿ ವಿಶ್ವಾಸದಿಂದ ಬಕ್ರೀದ್ ಹಬ್ಬವನ್ನು ಆಚರಿಸಬೇಕು.ವದಂತಿಗಳಿಗೆ ಕಿವಿಗೊಡದೇ ಪ್ರತ್ಯಕ್ಷವಾಗಿ ಕಂಡರೂ ಪ್ರಾಮಾಣಿಸಿ ನೋಡಬೇಕು.ಬಕ್ರೀದ್ ಹಬ್ಬಕ್ಕೆ ಹಿಂದೂ ಬಾಂಧವರನ್ನು ಮನೆಗೆ ಕರೆದು ಊಟ ಹಾಕುವ ಮೂಲಕ ಸ್ನೇಹ ಸಮೃದ್ಧತೆಗೆ ಸಾಕ್ಚಿಯಾಗಬೇಕು ಎಂದು ಮನವಿ ಮಾಡಿದ ಸುಧಾಕರ್ ಸಮಾಜದ ಶಾಂತಿ ನೆಮ್ಮದಿಗೆ ಭಂಗ ತರುವ ಕಿಡಿಗೇಡಿಗಳ ಬಗ್ಗೆ ಎಚ್ಚರವಾಗಿದ್ದು ಪೋಲಿಸರಿಗೆ ಮಾಹಿತಿ ನೀಡಿ ಸಹಕರಿಸಬೇಕು ಎಂದು ಕರೆ ನೀಡಿದರು.. ಕೆ.ಆರ್.ಪೇಟೆ ಪಟ್ಟಣ ಪೋಲಿಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಹೆಚ್.ಎಸ್.ವೆಂಕಟೇಶ್, ಗ್ರಾಮಾಂತರ ಪೋಲಿಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಆನಂದೇಗೌಡ, ಕಿಕ್ಕೇರಿ ಪೋಲಿಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಚಂದ್ರಶೇಖರ್ ಸೇರಿದಂತೆ ಹಿಂದೂ ಮುಸ್ಲಿಂ ಬಾಂಧವರು ಸಭೆಯಲ್ಲಿ ಭಾಗವಹಿಸಿದ್ದರು.

Share News

About admin

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *