Breaking News

ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬೆಳಗಾವಿಗೆ….!!!

ಬೆಳಗಾವಿ: ಬೆಳಗಾವಿಯಲ್ಲಿ ಎಲ್ಲ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ,ಜಲಾಶಯಗಳು ತುಂಬಿ ಎಲ್ಲ ನದಿಗಳ ಪಾತ್ರದಲ್ಲಿ ಜಲಪ್ರಳಯವಾಗಿದ್ದು,ಬೆಳಗಾವಿ ಜಿಲ್ಲೆಯ ಜಲ ತಾಂಡವ ನೋಡಲು ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಬೆಳಗಾವಿಗೆ ಆಗಮಿಸಲಿದ್ದಾರೆ.ಎಂದು ಬಲ್ಲ ಮೂಲಗಳು ತಿಳಿಸಿವೆ.ಪ್ರಧಾನಿ ನರೇಂದ್ರ ಮೋದಿ,ಮತ್ತು ಗೃಹ ಸಚಿವ ಅಮೀತ ಷಾ ಅವರ ಸೂಚನೆ ಮೇರೆಗೆ ಬೆಳಗಾವಿ ಜಿಲ್ಲೆಯ ಪ್ರವಾಹ ಪರಿಸ್ಥಿತಿ ಯನ್ನು ಸಮೀಕ್ಷೆ ಮಾಡಲು ಅವರು ನಾಳೆ ಶನಿವಾರ ‌ಬೆಳಿಗ್ಗೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿ ವಾಯು ಸೇನೆಯ ಹೆಲಿಕಾಪ್ಟರ್ ಮೂಲಕ ನೆರೆಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆಮುಖ್ಯ ಮಂತ್ರಿ ಯಡಿಯೂರಪ್ಪ ಅವರು ನೆರೆ ಪರಿಹಾರಕ್ಕಾಗಿ ಕೇಂದ್ರ ಸರ್ಕಾರ ಕೂಡಲೇ ಐದು ಸಾವಿರ ಕೋಟಿ ರೂ ಅನುದಾನ ನೀಡುವಂತೆ ಪ್ರಸ್ತಾವನೆ ಸಲ್ಲಿಸಿರುವ ಹಿನ್ನಲೆಯಲ್ಲಿ ಕೇಂದ್ರದ ಹಣಕಾಸು ಸಚಿವರೇ ಬೆಳಗಾವಿಗೆ ಆಗಮಿಸುತ್ತಿರುವದು ವಿಶೇಷವಾಗಿದೆ.

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *