ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರೆದ ಮಳೆ ಅಬ್ಬರದಿಂದ ಇದ್ದಕ್ಕಿದ್ದಂತೆ ನೇತ್ರಾವತಿ ನೀರಿನ ಮಟ್ಟ ಹೆಚ್ಚಳವಾಗಿದೆ.ನೇತ್ರಾವತಿ ನದಿ ನೀರಿನ ಅಪಾಯದ ಮಟ್ಟ 8.5 ಮೀ. ಆಗಿದೆ.ಬೆಳಗ್ಗೆ 10ರ ವೇಳೆಗೆ ನೇತ್ರಾವತಿ ನದಿ ನೀರಿನ ಮಟ್ಟ 8.7 ಮೀಟರ್ ಇತ್ತು. ಸದ್ಯ ನೇತ್ರಾವತಿ ನದಿ10.0 ಮೀ. ಅಪಾಯ ಮಟ್ಟದಲ್ಲಿ ಹರಿಯುತ್ತಿದೆ. ಉಪ್ಪಿನಂಗಡಿ ನೇತ್ರಾವತಿ 31.5 MTR, ಉಪ್ಪಿನಂಗಡಿ 26.5 ಮೀ, ಕುಮಾರಧಾರ ನದಿ ಹಾಗೂ ಗುಂಡ್ಯ ನದಿಗಳು 5.0 ಮೀ. ಅಪಾಯ ಮಟ್ಟದಲ್ಲಿ ಹರಿಯುತ್ತಿವೆ.ಬಂಟ್ವಾಳ ಸುತ್ತಮುತ್ತಲಿನ ಪರಿಸರದಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ.ಬಂಟ್ವಾಳ, ಬೆಳ್ತಂಗಡಿ ತಾಲೂಕಿನ ಹಲವು ಮನೆಗಳು ಮುಳುಗಡೆಯಾಗಿವೆ. ನದಿ ತೀರದ ಕೆಲ ಮನೆ, ಅಂಗಡಿಗಳಿಗೂ ನೀರು ನುಗ್ಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





