ಮಂಗಳೂರು: ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿ ನೀರಿನ ಪ್ರಮಾಣ ಹೆಚ್ಚುತ್ತಿರುವಂತೆಯೇ, ನದಿ ತೀರದ ಪ್ರದೇಶಗಳು ಮುಳುಗಡೆಗೊಳ್ಳುತ್ತಿದ್ದು, ನೀರಿನ ರಭಸಕ್ಕೆ ವಳಾಲು ತೂಗುಸೇತುವೆ ನೀರುಪಾಲಾಗಿದೆ.
ಶುಕ್ರವಾರ ಸಂಜೆಯ ವೇಳೆಗಾಗಲೇ ತೂಗುಸೇತುವೆಯ ಮೇಲಕ್ಕೆ ನೀರು ಬಂದಿದ್ದು, ಮರಗಳು ಬಡಿದು ಹಾನಿ ಸಂಭವಿಸಿತ್ತು. ರಾತ್ರಿಯಾಗುತ್ತಿದ್ದಂತೆ ಸೇತುವೆಯ ಮಧ್ಯ ಭಾಗ ಮುರಿದು ಬಿದ್ದಿದ್ದು, ನೀರುಪಾಲಾಗಿದೆ.ನೇತ್ರಾವತಿ ನದಿ ಬಂಟ್ವಾಳ್ ದಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಮಣಿಹಳ್ಳ ಬಂಟ್ವಾಳ್ ಮುಂತಾದ ಕಡೆಗಳಲ್ಲಿ ನದಿ ನೀರು ರಸ್ತೆ ಗೆ ಬಂದಿರುವ ಕಾರಣ ಬಂಟ್ವಾಳ್ ಧರ್ಮಸ್ಥಳ ರಸ್ತೆ ಸಂಚಾರ ಬಂದ್ ಮಾಡಲಾಗಿದೆ .ಉಪ್ಪಿನಂಗಡಿ ಮಾಣಿ ರಸ್ತೆಯಲ್ಲೂ ವಾಹನ ಸಂಚಾರ ಬಂದ್ ಮಾಡಲಾಗಿದೆ .ಬಂಟ್ವಾಳ ತಾಲೂಕಿನ ವಿವಿಧೆಡೆ ಮಳೆ ತೀವ್ರಗೊಂಡಿರುವುದರಿಂದ ಶಾಸಕ ರಾಜೇಶ್ ನಾಯ್ಕ್ ಮದ್ಯೆ ರಾತ್ರಿಯಲ್ಲೂ ಅಪಾಯಕ್ಕ್ಕೆ ಸಿಲುಕಿದ ಜನರನ್ನು ಸ್ಥಳಾಂತರ ಮಾಡುವ ಕಾರ್ಯದಲ್ಲಿ ತೊಡಗಿದ್ದರು .ಬಂಟ್ವಾಳ್ ತಾಲೂಕಿನ ವಿವಿಧೆಡೆ ನೂರಕ್ಕೂ ಹೆಚ್ಚು ಕುಟುಂಬಗಳನ್ನು ಸ್ಥಳಾಂತರ ಮಾಡಲಾಗಿದೆ .ಬೆಳ್ತಂಗಡಿ ತಾಲೂಕಿನ ವಿವಿಧೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ .ನೂರಾರು ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ .15 ಕ್ಕೂ ಹೆಚ್ಚು ಕಡೆಗಳಲ್ಲಿ ನಿರ್ವಹಿಸಿತರ ಕೇಂದ್ರಗಳನ್ನು ತೆರೆಯಲಾಗಿದೆ .ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸಂತ್ರಸ್ತರ ಪರಿಹಾರ ಕೇಂದ್ರಗಳಿಗೆ ಬೆಳಗಿನ ಜಾವ ಭೇಟಿ ನೀಡಿದರು .ಅಗತ್ಯ ವ್ಯವಸ್ಥೆಗಳನ್ನು ಮಾಡಿದರು .ಸ್ಥಳಾಂತರಗೊಂಡ ಜನರಿಗೆ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡಲು ದಾನಿಗಳು ಮುಂದಾಗುವಂತೆ ಮನವಿ ಮಾಡಿದರು .
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಜಿಲ್ಲೆಯ ಪ್ರವಾಹ ಪರಿಸ್ಥಿತಿ ಅವಲೋಕನ ಮಾಡುತ್ತಿದ್ದು ಕಳೆದ ರಾತ್ರಿಯೀ ಡಿ ನೆರೆಪೀಡಿತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಜನರರಿಂದ ಪ್ರಶಂಸೆಗೊಳಗಾದರು .
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೆರೆ ಪರಿಸ್ಥಿತಿ ಮುಂದುವರಿದಿರುವುದರಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಮಣ್ಯ ಕ್ಷೇತ್ರಕ್ಕೆ ಆಗಮಿಸುವ ಯಾತ್ರಾರ್ಥಿಗಳು ತಮ್ಮ ತೀರ್ಥ ಯಾತ್ರೆಯನ್ನು ಕೂಡ ಮುಂದೂಡುವುದೇ ಸೂಕ್ತವಾಗಿದೆ .
bigtvnews | Hubli Dharwad News | Kannada News | Karnataka News Hubli News | News In Hubli | Local news





