ಬೆಳಗಾವಿ: ಬೆಳಗಾವಿಗೆ ಆಗಮಿಸಿದ ಮಾಜಿ ಸಿಎಂ ಕುಮಾರಸ್ವಾಮಿಯವರು ನೆರೆ ಪೀಡಿತ ಪ್ರದೇಶಗಳಿಗೆ ಹೋಗಿ ಪರಿಶೀಲನೆ ನಡೆಸಿದರು. ಈ ವೇಳೆ ಜನರು ಅವರಿಗೆ ಉಂಟಾಗಿರುವ ಸಮಸ್ಯೆಯನ್ನ ಬಗೆಹರಿಸಿ, ಪರಿಹಾರ ವಿತರಿಸುವಂತೆ ಆಗ್ರಹಿಸಿದರು.ಇಂದು ಬೆಳಗಾವಿಗೆ ಆಗಮಿಸಿದ ಮಾಜಿ ಸಿಎಂ ಕುಮಾರಸ್ವಾಮಿಯವರನ್ನ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೋಮ್ಮನಹಳ್ಳಿ, ಪೊಲೀಸ್ ಆಯುಕ್ತ ಲೋಕೆಶ್ ಕುಮಾರ, ಇನ್ನುಳಿದ ಅಧಿಕಾರಿಗಳು ಸ್ವಾಗತಿಸಿ ಬರಮಾಡಿಕೊಂಡರು. ನಂತರ ನೇರವಾಗಿ ಮಾಜಿ ಸಿಎಂ ಕುಮಾರಸ್ವಾಮಿ ನೇಕಾರ ಕಾಲನಿ, ಸಾಯಿನಗರ ವಡಗಾಂವ, ಮರಾಠಾ ಕಾಲನಿ, ಹಳೇ ಪಿಬಿ ರಸ್ತೆ ಸೇರಿದಂತೆ ಪ್ರವಾಹ ಪೀಡಿತ ಪ್ರದೇಶಕ್ಕೆ ತೆರಳಿ ಪರಿಶೀಲಿಸಿದರು. ಜನರಿಗೆ ಉಂಟಾದ ಸಮಸ್ಯೆಯನ್ನ ಆಲಿಸಿದರು.ಈ ವೇಳೆ ಮಹಿಳೆಯರು ಮಾತನಾಡಿ ತಾವಿದ್ದ ಮನೆ ನೀರಿನಲ್ಲಿ ಕೊಚ್ಚಿ ಹೋಗಿದೆ. ಜನಜೀವನ ಅಸ್ತವ್ಯಸ್ಥಗೊಂಡಿದೆ. ನಮಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.ನಂತರ ಮಾಜಿ ಸಿಎಂ ಕುಮಾರಸ್ವಾಮಿ ಇಲ್ಲಿಂದ ಹುಕ್ಕೇರಿ ತಾಲೂಕಿನ ಬರಪೀಡಿತ ಪ್ರದೇಶಗಳಿಗೆ ತೆರಳಿ ಸಮೀಕ್ಷೆ ನಡೆಸಿದರು. ಪ್ರವಾಹ ಪೀಡಿತ ಪ್ರದೇಶಕ್ಕೆ ತೆರಳುತ್ತಿದ್ದಂತೆ ಪ್ರವಾಹಪೀಡಿತ ಜನರು ಕುಮಾರಸ್ವಾಮಿಯವರ ಮುಂದೆ ಮುಗಿಬಿದ್ದು, ತಮಗೆ ಉಂಟಾಗಿರುವ ಸಮಸ್ಯೆಯನ್ನ ತಿಳಿಸಿದರು. ಭಾರಿ ಮಳೆಯಿಂದಾಗಿ ನಮ್ಮ ಜನಜೀವನ ಅಸ್ತವ್ಯಸ್ಥಗೊಂಡಿದೆ. ನಮಗೆ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿದರು. ನಂತರ ಸಂಕೇಶ್ವರದಲ್ಲಿ ಧುಮ್ಮುಕ್ಕಿ ಹರಿಯುತ್ತಿರುವ ಹಿರಣ್ಯಕೇಶಿ ನದಿಯ ವೀಕ್ಷಣೆ ಮಾಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





