ಚಾಮರಾಜನಗರ: ಕೆ.ಆರ್.ಎಸ್, ಕಬಿನಿ ಜಲಾಶಯಕ್ಕೆ ಒಳ ಹರಿವು ಹೆಚ್ಚಾಗುತ್ತಿದ್ದು ನದಿಗೆ 2 ಲಕ್ಷ ಕ್ಯೂಸೆಕ್ಸ್ ನೀರನ್ನು ಬಿಟ್ಟಿದ್ದು ಇನ್ನು ಅಧಿಕ ಪ್ರಮಾಣದಲ್ಲಿ ನೀರು ಹರಿಸುವ ಸಾಧ್ಯತೆ ಹಿನ್ನಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ವೆಸ್ಲಿ ಸೇತುವೆ ವ್ಯಾಪ್ತಿ ಪ್ರದೇಶದಲ್ಲಿ ಆಗಸ್ಟ್ 10ರಿಂದ ಆಗಸ್ಟ್ 25ರ ವರೆಗೆ ಸಾರ್ವಜನಿಕರ ಓಡಾಟ, ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಆದೇಶ ಹೋರಡಿಸಿದ್ದಾರೆ.ವೆಸ್ಲಿ ಸೇತುವೆಯು ಶಿಥಿಲಗೊಂಡಿರುವ ಹಿನ್ನಲೆಯಲ್ಲಿ ಸಾರ್ವಜನಿಕರ ಓಡಾಟದಿಂದ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ನೋಡಿಕೊಳ್ಳುವ ಹಿನ್ನಲೆಯಲ್ಲಿ ಸಾರ್ವಜನಿಕರ ಹಿತ ದೃಷ್ಟಿಯಿಂದ ವೆಸ್ಲಿ ಸೇತುವೆಯ ವ್ಯಾಪ್ತಿ ಪ್ರದೇಶದಲ್ಲಿ ಸೂಚಿಸಲಾಗಿರುವ ನಿಗದಿತ ಅವಧಿಯವರೆಗೆ ಸಾರ್ವಜನಿಕರ ಓಡಾಟ, ಸಂಚಾರವನ್ನು ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





