Breaking News

ಮಂಡ್ಯ ಜಿಲ್ಲೆ ಕೃಷ್ಣರಾಜಪೇಟೆ ಪಟ್ಟಣಕ್ಕೆ ಆಗಮಿಸುತ್ತಿರುವ ಜನಪ್ರಿಯ ಶಾಸಕ ಡಾ. ನಾರಾಯಣಗೌಡ.

ಮಂಡ್ಯ: ಜನಪ್ರಿಯ ಜನನಾಯಕರು, ತಾಲ್ಲೂಕಿನ ಅಭಿವೃದ್ಧಿಯ ಹರಿಕಾರರು, ಬಡಜನರು ಧೀನ-ದಲಿತರಸೇವೆಯಲ್ಲಿ ಭಗವಂತನನ್ನು ಕಾಣುತ್ತಿರುವ ಶಾಸಕರಾದ ಡಾ. ನಾರಾಯಣಗೌಡ ಅವರು ಆಗಷ್ಟ್‌ 12ರ ಸೋಮವಾರ ಬೆಳಿಗ್ಗೆ 9ಗಂಟೆಗೆ ಮಂಡ್ಯ ಜಿಲ್ಲೆ ಕೃಷ್ಣರಾಜಪೇಟೆ ಪಟ್ಟಣಕ್ಕೆ ಆಗಮಿಸುತ್ತಿದ್ದಾರೆ.ಭ್ರಮರಾಂಭ ಶ್ರೀಚೆನ್ನಮಲ್ಲಿಕಾರ್ಜುನ, ಈಶ್ವರ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥವಾಗಿ ವಿಶೇಷ ಪೂಜೆ ಸಲ್ಲಿಸಿ, ಪಟ್ಟಣದ #ಈದ್ಗಾ ಮೈದಾನದಲ್ಲಿ ಬಕ್ರೀದ್ ಹಬ್ಬದ ವಿಶೇಷ ಪ್ರಾರ್ಥನೆಯಲ್ಲಿ ಭಾಗವಹಿಸಿ, ಪ್ರವಾಸಿ ಮಂದಿರದಲ್ಲಿ ಅಗತ್ಯವಾಗಿ ಆಗಬೇಕಾಗಿರುವ ಅಭಿವೃದ್ಧಿ ಕೆಲಸ-ಕಾರ್ಯಗಳ ಕುರಿತು, ತಾಲ್ಲೂಕಿನ ಅಧಿಕಾರಿಗಳ ಸಭೆ ನಡೆಸಿ ನೆರೆ ಪೀಡಿತ ಪ್ರದೇಶಗಳ ಸಮೀಕ್ಷೆ ನಡೆಸಲಿದ್ದಾರೆ. ಆದ್ದರಿಂದ ನಾರಾಯಣಗೌಡರ ಅಭಿಮಾನಿಗಳು ಆಗಮಿಸಿ ಈಶ್ವರ ದೇವಸ್ಥಾನದಲ್ಲಿ ನಡೆಯುವ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಶಾಸಕ ನಾರಾಯಣಗೌಡರ ಆಪ್ತಸಹಾಯಕ ದಯಾನಂದ ಮನವಿ ಮಾಡಿದ್ದಾರೆ.

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *