Breaking News

ಮಂಡ್ಯ ಜಿಲ್ಲೆಯ ದೊದ್ದನಕಟ್ಟೆ ಸೇತುವೆಯ ಬಳಿ ಅಪರಿಚಿತ ಪುರುಷನ ಶವ ಪತ್ತೆ

ಮಂಡ್ಯ: ವಿಠಲಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಂಡ್ಯ ಜಿಲ್ಲೆಯ ದೊದ್ದನಕಟ್ಟೆ ಸೇತುವೆಯ ಬಳಿ ಅಪರಿಚಿತ ಪುರುಷನ ಶವ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.40-45 ವರ್ಷ ವಯಸ್ಸಿನ ಪುರುಷನ ಶವವನ್ನು ದೊದ್ದನಕಟ್ಟೆ ಬಳಿಯ ಸೇತುವೆಯ ಪಕ್ಕದಲ್ಲಿ ಬಿಸಾಡಿ ಹೋಗಿದ್ದಾರೆ.ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ಮೃತ ದೇಹವನ್ನು ತಂದು ಬಿಸಾಕಿ ಹೋಗಿರಬಹುದು ಎಂದು ಪೋಲಿಸರು ಶಂಕಿಸಿದ್ದಾರೆ.ಮೃತ ವ್ಯಕ್ತಿಯ ಬಗ್ಗೆ ತಿಳಿದವರು ಕೆ.ಆರ್.ಪೇಟೆ ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎನ್.ಸುಧಾಕರ್ ಅಥವಾ ಗ್ರಾಮಾಂತರ ಪೋಲಿಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಆನಂದೇಗೌಡ ಅವರನ್ನು ಸಂಪರ್ಕಿಸಿ ಮಾಹಿತಿ ನೀಡಬೇಕು ಎಂದು ಗ್ರಾಮಾಂತರ ಪೋಲಿಸರು ಮನವಿ ಮಾಡಿದ್ದಾರೆ ಮೃತ ದೇಹವನ್ನು ಕೆ.ಆರ್.ಪೇಟೆ ಪಟ್ಟಣದ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ. ಹೆಚ್ಚಿನ ವಿವರಗಳಿಗೆ ಮೊ..9480804860 ಅಥವಾ 9480804833 ಸಂಪರ್ಕಿಸಲು ಮನವಿ ಮಾಡಲಾಗಿದೆ.

Share News

About admin

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *