Breaking News

ಸಡಗರ ಸಂಭ್ರಮದಿಂದ ಬಕ್ರೀದ್ ಹಬ್ಬ ಆಚರಣೆ

ಮಂಡ್ಯ : ಬಕ್ರೀದ್ ಹಬ್ಬದ ವನ್ನು ಮುಸ್ಲಿಂ ಬಾಂಧವರು ಕೆ.ಆರ್.ಪೇಟೆಯಲ್ಲಿ ಸಡಗರ ಸಂಭ್ರಮದಿಂದ ಆಚರಣೆ ಮಾಡಿದರು.ಪಟ್ಟಣದ ಎಸ್.ಬಿ.ರಸ್ತೆಯಲ್ಲಿರುವ ಹಳೆ ಮಸೀದಿ ಆವರಣದಿಂದ ಸಾಮೂಹಿಕ ಮೆರವಣೆಗೆ ಹೊರಟ ಮುಸಲ್ಮಾನ್ ಬಾಂಧವರು ಸರ್ಕಾರಿ ಆಸ್ಪತ್ರೆ ಬಳಿ ಇರುವ ಈದ್ಗಾ ಮೈಧಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.ಪರಸ್ಪರ ಬಕ್ರೀದ್ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡು ಸಂಭ್ರಮಿಸಿದರು.ಜಲಾ ಪ್ರವಾಹದಿಂದ ನಲುಗುತ್ತಿರುವ ನಾಡಿನ ಜನರನ್ನು ರಕ್ಷಿಸಬೇಕು. ಮುಂದೆ ಯಾವುದೇ ಅನಾಹುತ ಸಂಭವಿಸದಿರಲೆಂದು ಅಲ್ಲಾನಲ್ಲಿ ಪ್ರಾರ್ಥನೆ ಸಲ್ಲಿಸಿದರು.ಅನರ್ಹ ಶಾಸಕ ನಾರಾಯಣಗೌಡ, ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್, ಜಿಲ್ಲಾ ಪಂಚಾಯಿತಿ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಹೆಚ್.ಟಿ.ಮಂಜು, ಜೆಡಿಎಸ್ ಹಿರಿಯ ಮುಖಂಡ ಬಸ್ ಕೃಷ್ಣೇಗೌಡ, ಪುರಸಭಾ ಸದಸ್ಯ ಕೆ.ಸಿ.ಮಂಜುನಾಥ್ ಮತ್ತಿತರರು ಮುಸಲ್ಮಾನ್ ಬಾಂಧವರಿಗೆ ಬಕ್ರೀದ್ ಶುಭಾಶಯ ಕೋರಿದರು.

Share News

About admin

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *