Breaking News

ಮಾಜಿ‌ ಸಿಎಂ ಸಿದ್ದರಾಮಯ್ಯ ಹುಟ್ಟು ಹಬ್ಬದ ನಿಮಿತ್ತ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಮಂಡ್ಯ : ಮಾಜಿ ಸಿಎಂ ಸಿದ್ಧರಾಮಯ್ಯ ಅವರ 72ನೇ ಹುಟ್ಟು ಹಬ್ಬದ ಅಂಗವಾಗಿ ತಾಲ್ಲೂಕು ಕಾಂಗ್ರೆಸ್ ಸಮಿತಿಯ ವತಿಯಿಂದ ಸಾರ್ವಜನಿಕ ದುಂಡಶೆಟ್ಟ ಲಕ್ಷ್ಮಿ ಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಹಂಫಲು ವಿತರಣೆ ಮಾಡಲಾಯಿತು.ಮಾಜಿಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ 72ನೇ ಹುಟ್ಟು ಹಬ್ಬದ ಅಂಗವಾಗಿ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ಪಟ್ಟಣದ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಮಾಜಿಶಾಸಕರಾದ ಕೆ.ಬಿ.ಚಂದ್ರಶೇಖರ್, ಬಿ.ಪ್ರಕಾಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಿಕ್ಕೇರಿ ಸುರೇಶ್, ಕೆ.ಆರ್.ರವೀಂದ್ರಬಾಬು ಮತ್ತು ಜಿ.ಪಂ ಸದಸ್ಯ ಕೋಡಿಮಾರನಹಳ್ಳಿ ದೇವರಾಜು ಅವರ ನೇತೃತ್ವದಲ್ಲಿ ಹಣ್ಣು ಹಂಫಲು ವಿತರಿಸಲಾಯಿತು.ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ಹರಿಕಾರರಾದ ಸಿದ್ಧರಾಮಯ್ಯ ಅವರು ನೂರ್ಕಾಲ ಆರೋಗ್ಯವಂತರಾಗಿ ಬಾಳುವ ಶಕ್ತಿಯನ್ನು ತಾಯಿ ಭುವನೇಶ್ವರಿ ದೇವಿಯು ನೀಡುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸಲಾಯಿತು ಎಂದು ಚಂದ್ರಶೇಖರ್ ಪತ್ರಕರ್ತರಿಗೆ ಮಾಹಿತಿ ನೀಡಿದರು.ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಜಗನ್ನಾಥ ಅವರೊಂದಿಗೆ ಸಮಾಲೋಚನೆ ನಡೆಸಿದ ಚಂದ್ರಶೇಖರ್ ರೋಗಿಗಳೊಂದಿಗೆ ಆರೋಗ್ಯ ಕುಶಲೋಪರಿ ನಡೆಸಿದರು.

Share News

About admin

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *