Breaking News

ನೆರೆಗೆ ಹಾನಿಗೊಳಗಾದ ಸ್ಥಳಗಳಿಗೆ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿ

ಹುಬ್ಬಳ್ಳಿ:ಮಳೆಯಿಂದ ಹಾನಿಗೊಳಗಾದ ಸ್ಥಳಗಳಾದ ದೇವಿನಗರ, ಕುಂಬಾರ ಓಣಿ, ಹಳೇಹುಬ್ಬಳ್ಳಿ ಸೇರಿದಂತೆ ಇನ್ನಿತರ ಪ್ರದೇಶಗಳಿಗೆ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿದರು. ಇದೇ ಸಂದರ್ಭದಲ್ಲಿ ಮಹಿಳೆ ಹಾಗೂ ವೃದ್ದೆಗೆ ಹಣ ನೀಡಿದರು.ಮಳೆ ಹಾನಿಗೆ ಒಳಗಾದ ದೇವಿನಗರದ ಮನೆ ಮನೆಗಳಿಗೂ ಭೇಟಿ ನೀಡಿದ ನಿಖಿಲ್‌ಕುಮಾರಸ್ವಾಮಿ, ಸಂತ್ರಸ್ತರ ಸಮಸ್ಯೆ ಆಲಿಸಿ ಕೈಲಾದ ಸಹಾಯ ಮಾಡಿದರು. ಹಾಗೇ ಎಲ್ಲರಿಗೂ ಆದಷ್ಟು ಬೇಗ ಪರಿಹಾರ ನೀಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.ನಂತರ ಮಾಧ್ಯಮದ ಜೊತೆ ಮಾತನಾಡಿದ ಅವರು, ಸತತ ಮಳೆಗೆ ರಾಜ್ಯ ತತ್ತರಿಸಿ ಹೋಗಿದೆ. ಈ ಹಿನ್ನೆಲೆಯಲ್ಲಿ ಜನರ ಸಂಕಷ್ಟ ನೋಡಿ ಹೊಟ್ಟೆ ಉರಿಯುವ ರೀತಿಯಾಗುತ್ತಿದೆ‌. ಇಂತಹ ಸಂದರ್ಭಗಳಲ್ಲಿ ರಾಜಕೀಯ ಮಾಡದೇ ಮಾನವೀಯ ದೃಷ್ಟಿಯಿಂದ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ಮಳೆಯಿಂದಾಗಿ ದೊಡ್ಡ ಮಟ್ಟದ ಹಾನಿಯಾಗಿದ್ದು, ಮನೆಯಲ್ಲಿದ್ದ ವಸ್ತುಗಳು, ಅಗತ್ಯ ದಾಖಲೆಗಳು ನೀರಿನಲ್ಲಿ ಮುಳುಗಡೆಯಾಗಿವೆ. ಇದರಿಂದ ಅಪಾರ ಪ್ರಮಾಣದ ಹಾನಿಯಾಗಿದೆ. ತೊಂದರೆಗೆ ಒಳಗಾದ ಜನರಿಗೆ ಪ್ರಯತ್ನ ಮೀರಿ ಸಹಾಯ ಮಾಡಲಾಗುವುದು. ಅಲ್ಲದೇ ಅತಿವೃಷ್ಟಿ, ಅನಾವೃಷ್ಟಿ ಆದ ಪ್ರದೇಶಗಳನ್ನ ಗಮನ ಹರಿಸಿ ಹಾನಿಗೊಳಗಾದ ಜನರಿಗೆ ಸಹಾಯ ಮಾಡಬೇಕು. ಹೀಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಹೆಚ್ಚಿನ ಗಮನ ಹರಿಸಬೇಕು.ಅಲ್ಲದೇ ಮಂತ್ರಿಮಂಡಲದ ರಚನೆ ಆಗದಿರೋದಕ್ಕೆ ಹಲವಾರು ಕಾರಣಗಳಿವೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ಈ ಸಂದರ್ಭದಲ್ಲಿ ಸಿಎಂ ಆದವರೇ ಎಲ್ಲ ಕೆಲಸ ಮಾಡಲು ಅಸಾಧ್ಯ. ಹಾಗಾಗಿ ಎಲ್ಲರೂ ಒಟ್ಟಾಗಿ ಜನರಿಗೆ ಸ್ಪಂದಿಸಬೇಕೆಂದು ಹೇಳಿದರು. ಇದೇ ಸಂದರ್ಭದಲ್ಲಿ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ, ಮಾಜಿ ಶಾಸಕ ಎನ್ ಹೆಚ್ ಕೋನರೆಡ್ಡಿ ಹಾಗೂ ಕಾರ್ಯಕರ್ತರು ನಿಖಿಲ್​ಗೆ ಸಾಥ್ ನೀಡಿದರು.

Share News

About admin

Check Also

ಇಟ್ಟಂಗಿ ತುಂಬಿದ ಟೆಂಪೋ, ಬೈಕ್ ಡಿಕ್ಕಿ ಸವಾರ ಸಾವು.!!

ಇಟ್ಟಿಗೆ ತುಂಬಿದ ಟೆಂಪೋ ಬೈಕ್ ಮಧ್ಯೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ತಾಲೂಕಿನ ಮನಸೂರ ಕ್ರಾಸ್ ಬಳಿ …

Leave a Reply

Your email address will not be published. Required fields are marked *