Breaking News

ನೆರೆ ಸಂತ್ರಸ್ತರ ವಿಚಾರದಲ್ಲಿ ರಾಜಕೀಯ ಸಲ್ಲ: ನಿಖಿಲ ಕುಮಾರಸ್ವಾಮಿ

ಹುಬ್ಬಳ್ಳಿ: ಉತ್ತರ ಕರ್ನಾಟಕದಲ್ಲಿ ಭಾರಿ ಪ್ರವಾಹ ಹಿನ್ನೆಲೆಯಲ್ಲಿ ಸಂತ್ರಸ್ತರ ನೆರವಿಗೆ ಜೆಡಿಎಸ್​ ಪಕ್ಷ ಮುಂದಾಗಿದ್ದು, ಸಂತ್ರಸ್ತರಿಗೆ ಬೇಕಾದ ಅಗತ್ಯ ವಸ್ತುಗಳ ರವಾನೆಗೆ ಸಿದ್ಧತೆ ಮಾಡಿಕೊಂಡಿದೆ ಎಂದು ನಟ ಹಾಗೂ ಜೆಡಿಎಸ್ ಯುವ ಘಟಕ ರಾಜಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.ಹುಬ್ಬಳ್ಳಿಯಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರವಾಹದಿಂದ ಜನರು ತತ್ತರಿಸಿ ಹೋಗಿದ್ದಾರೆ. ಈ ಸಮಯದಲ್ಲಿ ಈ ವಿಚಾರದಲ್ಲಿ ನಾವು ರಾಜಕೀಯ ಮಾತನಾಡುವುದು ಸೂಕ್ತವಲ್ಲ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು.ವರುಣನ ಆರ್ಭಟಕ್ಕೆ ಜನರು ಬೀದಿಗೆ ಬಂದಿದ್ದಾರೆ ಹೀಗಾಗಿ ನಮ್ಮ ಪಕ್ಷದ ವತಿಯಿಂದ ಜನರಿಗೆ ಕೈಲಾದಷ್ಟು ಸಹಾಯ ಮಾಡುತ್ತೆವೆ, ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ನೆರವು ನೀಡಬೇಕು ಎಂದು ಇದೇ ವೇಳೆ ನಿಖಿಲ್ ಕುಮಾರಸ್ವಾಮಿ ಒತ್ತಾಯ ಮಾಡಿದರು.

Share News

About admin

Check Also

ಇಟ್ಟಂಗಿ ತುಂಬಿದ ಟೆಂಪೋ, ಬೈಕ್ ಡಿಕ್ಕಿ ಸವಾರ ಸಾವು.!!

ಇಟ್ಟಿಗೆ ತುಂಬಿದ ಟೆಂಪೋ ಬೈಕ್ ಮಧ್ಯೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ತಾಲೂಕಿನ ಮನಸೂರ ಕ್ರಾಸ್ ಬಳಿ …

Leave a Reply

Your email address will not be published. Required fields are marked *