ಹುಬ್ಬಳ್ಳಿ: ನೆರೆ ಹಾವಳಿಗೆ ಒಳಗಾದ ಉತ್ತರ ಕರ್ನಾಟಕ ಪ್ರದೇಶಗಳಿಗೆ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಜೆಡಿಎಸ್ ಮುಖಂಡ ಎನ್.ಹೆಚ್.ಕೋನರೆಡ್ಡಿ ಆಗ್ರಹಿಸಿದರು.ಮಳೆಯಿಂದಾಗಿ ಹಾನಿಯಾದ ಕುಟುಂಬಗಳ ಸದಸ್ಯರನ್ನು ಭೇಟಿ ಮಾಡಿ ನಂತರ ಮಾತನಾಡಿದ ಅವರು, ಒಂದು ವಾರದಿಂದ ಸುರಿದ ಮಳೆಗೆ ಹುಬ್ಬಳ್ಳಿ, ಧಾರವಾಡ, ನವಲಗುಂದ, ಅಳ್ನಾವರ ತಾಲೂಕುಗಳಲ್ಲಿ ಬಹಳಷ್ಟು ಹಾನಿಯಾಗಿದೆ. ಜನ ತೊಂದರೆಗೀಡಾಗಿರುವ ಹಿನ್ನೆಲೆ ಉತ್ತರ ಕರ್ನಾಟಕದ ಬೆಳಗಾವಿ, ಚಿಕ್ಕೋಡಿ ಸೇರಿದಂತೆ ಇನ್ನಿತರ ಪ್ರದೇಶಗಳಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದರು.ಈ ಹಿಂದೆ ಬಿಜೆಪಿಯವರು ಅಧಿಕಾರ ಹಿಡಿಯುವಲ್ಲಿದ್ದ ವೇಗ ಅಧಿಕಾರ ಸಿಕ್ಕ ಮೇಲೆ ತಣ್ಣಗಾದಂತೆ ಕಾಣುತ್ತಿದೆ. ಕೇಂದ್ರ ಸರ್ಕಾರ ಸಮರೋಪಾದಿಯಲ್ಲಿ ಕೆಲಸ ಮಾಡಿ ಜನರ ಸಂಕಷ್ಟಕ್ಕೆ ಸ್ಪಂದಿಸಬೇಕು. ಅಲ್ಲದೇ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ಒದಗಿಸುವ ಕೆಲಸ ಮಾಡಬೇಕು ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





