Breaking News

ಮಂಡ್ಯದ ಮೈಸೂರು ದೇವರಾಜ ಮಾರುಕಟ್ಟೆಯಲ್ಲಿ ಏಕಾಏಕಿ ಬೆಂಕಿ

ಮಂಡ್ಯ: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿ ಸುಮಾರು 10 ಕ್ಕೂ ಹೆಚ್ಚು ಮಳಿಗೆಗಳು ಬೆಂಕಿಗಾಗುತಿಯಾದ ಘಟನೆ ಇಲ್ಲಿನ ದೇವರಾಜ ಮಾರುಕಟ್ಟೆಯಲ್ಲಿ ನಡೆದಿದೆ.ಸುಮಾರು 100 ವರ್ಷಗಳ ಇತಿಹಾಸವಿರುವ ಮೈಸೂರಿನ ದೇವರಾಜ ಮಾರುಕಟ್ಟೆಗೆ ಇಂದು ಏಕಾಏಕಿ ಬೆಂಕಿ ಹೊತ್ತಿಕೊಂಡು ಉರಿದಿದೆ.ಗದ್ದಿಗೆ ಅಂಗಡಿ ಸೇರಿ ಹೂವಿನ ಅಂಗಡಿಗಳು ಹಾಗೂ ಹತ್ತಕ್ಕೂ ಹೆಚ್ಚು ಮಳಿಗೆಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿ ಹೊತ್ತಿಕೊಂಡ ತಕ್ಷಣ ಮಾರುಕಟ್ಟೆಯಲ್ಲಿ ಜನರು ಚದುರಲಾರಂಭಿಸಿದರು. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುವಂತಾಯಿತು.ದಟ್ಟ ಹೊಗೆಯಿಂದ ಅಕ್ಕಪಕ್ಕದ ಮಳಿಗೆ ಅಂಗಡಿದಾರರು ಅಂಗಡಿ ಮುಚ್ಚಿದರು.ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ.ದೇವರಾಜ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Share News

About admin

Check Also

ಪಿಎಸ್‌ಐ-ಪಿಸಿ ಮೇಲೆ ಲೋಕಾಯುಕ್ತ ದಾಳಿ: ಠಾಣೆ ಮುಂದೆ ಪಟಾಕಿ ಸಿಡಿಸಿ ಜನರ ಸಂಭ್ರಮ!

ಭ್ರಷ್ಟಾಚಾರಕ್ಕೆ ಬಿಗಿ ಹೊಡೆತ: ಪಿಎಸ್‌ಐ, ಪಿಸಿ ಬಂಧನಕ್ಕೆ ಠಾಣೆ ಮುಂದೆ ಪಟಾಕಿ ಹಬ್ಬ! ಲೋಕಾಯುಕ್ತ ದಾಳಿ ನಂತರ ಜನರ ಸಂಭ್ರಮ: …

Leave a Reply

Your email address will not be published. Required fields are marked *