ಮಂಡ್ಯ: ವಯಸ್ಕರ ಶಿಕ್ಷಣ ಇಲಾಖೆಯ ಮಾಜಿ ತಾಲ್ಲೂಕು ಸಾಕ್ಷರತಾ ಸಂಯೋಜಕರು, ಮಂಡ್ಯ ಜಿಲ್ಲೆ ಮಂಡ್ಯ ಕ್ಯಾತನಹಳ್ಳಿ ಶಾಲೆಯ ಶಿಕ್ಷಕರಾದ ಸಿಂಧುಘಟ್ಟ ಮಂಜುನಾಥ್(50) ಅವರು ಅನಾರೋಗ್ಯದಿಂದ ನಿಧನ ಹೊಂದಿರುತ್ತಾರೆಮೃತರ ಅಂತ್ಯಕ್ರಿಯೆಯು ಆ.13ರಂದು ಮಂಗಳವಾರ ಮಧ್ಯಾಹ್ನ 12ರಿಂದ 1ಗಂಟೆಗೆ ಮೃತರ ಸ್ವಗ್ರಾಮ ಸಿಂಧುಘಟ್ಟ ಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.ಮೃತರು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಾಜಿ ವಿಶೇಷಾಧಿಕಾರಿಗಳಾದ ಸಿಂಧುಘಟ್ಟ ಅರವಿಂದ್ ಅವರ ಸಹೋದರ ಸಂಬಂಧಿಯಾಗಿರುತ್ತಾರೆ.ಮೃತರ ನಿಧನಕ್ಕೆ ನಿವೃತ್ತ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಡಾ. ಕೆ.ಕಾಳೇಗೌಡ, ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆಯ ನಿವೃತ್ತ ಜಿಲ್ಲಾ ಸಾಕ್ಷರತಾ ಕಾರ್ಯಕ್ರಮ ಅನುಷ್ಟಾನಾಧಿಕಾರಿ ಡಾ. ಅಂಚಿ ಸಣ್ಣಸ್ವಾಮಿಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ರೇವಣ್ಣ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎನ್.ಜಯರಾಂ, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಕೆ.ಶಿವರಾಮೇಗೌಡ, ತಾಲ್ಲೂಕು ಶಿಕ್ಷಣ ಇಲಾಖಾ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಅಗ್ರಹಾರಬಾಚಹಳ್ಳಿ ಯೋಗೇಶ್, ಸರ್ಕಾರಿ ನೌಕರರ ಸಂಘದ ನಿರ್ದೇಶಕರಾದ ಪದ್ಮೇಶ್, ಎಸ್.ಆರ್.ಆನಂದ್ ಕುಮಾರ್, ಪಿ.ಜೆ.ಕುಮಾರ್, ತಾಲ್ಲೂಕು ವಯಸ್ಕರ ಶಿಕ್ಷಣ ಇಲಾಖೆಯ ತಾಲ್ಲೂಕು ಸಂಯೋಜಕ ಎಂ.ಎಸ್.ಬಸವರಾಜು ಸೇರಿದಂತೆ ತಾಲ್ಲೂಕಿನ ವಿವಿಧ ಗಣ್ಯರು ಸಂತಾಪ ಸೂಚಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





