ಚಿಕ್ಕಬಳ್ಳಾಪುರ: ಕೆ ಎಸ್ ಆರ್ ಟಿ ಸಿ ಬಸ್ ಚಾಲಕರ ಧೋರಣೆಯನ್ನು ಖಂಡಿಸಿ ಇಂದು ನೂರಾರು ವಿದ್ಯಾರ್ಥಿಗಳು ಕೆ ಎಸ್ ಆರ್ ಟಿ ಸಿ ಬಸ್ ತಡೆದು ಪ್ರತಿಭಟನೆ ನಡೆಸಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಕೈವಾರ ಕ್ರಾಸ್ ಬಳಿ ನಡೆದಿದೆ.ನಿತ್ಯ ಇಲ್ಲಿ ನೂರಾರು ವಿದ್ಯಾರ್ಥಿಗಳು ಪ್ರಯಾಣ ಮಾಡುತ್ತಿದ್ದು, ಕೈವಾರ ಕ್ರಾಸ್ ಗೆ ವೇಗದೂತ ನಿಲುಗಡೆ ಇದ್ದರೂ ಬಸ್ ನಿಲ್ಲಿಸುವದಿಲ್ಲ. ಇದರಿಂದ ಪ್ರತಿನಿತ್ಯ ವಿದ್ಯಾರ್ಥಿಗಳು ಸಮಯಕ್ಕೆ ಕಾಲೇಜಿಗೆ ಹೋಗಲಾರದೆ ಪರದಾಡುವಂತಾಗಿದೆ ಎಂದು ಪ್ರತಿಭಟನಾನಿರತರು ಆರೋಪಿಸಿದರು. ಇದೇ ವೇಳೆ ವಿದ್ಯಾರ್ಥಿಗಳು ಚಾಲಕರ ನಡುವೆ ಮಾತಿನ ಚಕಮಕಿ ನಡೆದು ಪರಿಸ್ಥಿತಿ ವಿಕೋಪಕ್ಕೆ ಮುಟ್ಟಿ, ನೂಕುನುಗ್ಗಲು ಉಂಟಾಯಿತು.ಸ್ಥಳಕ್ಕೆ ಆಗಮಿಸಿದ ಚಿಂತಾಮಣಿ ಕಡೆ ಎಸ್ ಆರ್ ಟಿಸಿ ಮ್ಯಾನೇಜರ್ ಅಪ್ಪಿರೆಡ್ಡಿ ಪರಿಸ್ಥಿತಿ ತಿಳಿಗೊಳಿಸಲು ಹರಸಾಹಸ ಪಟ್ಟರು.
bigtvnews | Hubli Dharwad News | Kannada News | Karnataka News Hubli News | News In Hubli | Local news





