ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಪ್ರತಿಭಟನೆಗಿಳಿದ ಬಿಜೆಪಿ ಕಾರ್ಯಕರ್ತರ ಬಂಧನ.
ಹುಬ್ಬಳ್ಳಿಯ ನವನಗರದಲ್ಲಿ ನೂರಾರು ಕಾರ್ಯಕರ್ತರ ಬಂಧನ.
ಸಿಎಂ ಹುಬ್ಬಳ್ಳಿ ನಿವಾಸದೆದುರು ಪ್ರತಿಭಟನೆಗೆ ತೆರಳುತ್ತಿದ್ದ ಕಾರ್ಯಕರ್ತರು.
ಭೈರಿದೇವರ ಕೊಪ್ಪದ ಮಾಯಕಾರ ಕಾಲೋನಿಯಲ್ಲಿರುವ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಆಗಮಿಸಿದ ಬಿಜೆಪಿ ಕಾರ್ಯಕರ್ತರು.
ಹುಬ್ಬಳ್ಳಿ- ಧಾರವಾಡ ಮಹಾನಗರ ಜಿಲ್ಲಾ ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನೆ.
ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಯ ನಿರ್ಲಕ್ಷ್ಯ ಧೋರಣೆ ಹಾಗೂ ಒಡೆದು ಆಳುವ ನೀತಿ ಖಂಡಿಸಿ ಪ್ರತಿಭಟನೆ ಕೈಗೊಂಡಿದ್ದ ಬಿಜೆಪಿ ಕಾರ್ಯಕರ್ತರು.
ನೂರಾರು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಬಂಧಿಸಿದ ಪೊಲೀಸರು.
ನವನಗರದ ಕರ್ನಾಟಕ ವೃತ್ತದಲ್ಲಿ ಕಾರ್ಯಕರ್ತರನ್ನು ಬಂಧಿಸಿದ ಪೊಲೀಸರು.
ಡಿಸಿಪಿ ರೇಣುಕಾ ಸುಕುಮಾರ ನೇತೃತ್ವದಲ್ಲಿ ಕಾರ್ಯಕರ್ತರ ಬಂಧನ.
ಪ್ರತಿಭಟನೆ ಹಿನ್ನೆಲೆಯಲ್ಲಿ ಸಿಎಂ ಕುಮಾರಸ್ವಾಮಿ ನಿವಾಸದ ನಾಲ್ಕು ದಿಕ್ಕುಗಳಲ್ಲೂ ಪೊಲೀಸ್ ಬಿಗಿ ಭದ್ರತೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





