Breaking News

ದೆಹಲಿ ರಾಷ್ಟ್ರೀಯ ನಾಟಕ ಶಾಲೆಯಲ್ಲಿ ವಿದ್ಯಾರ್ಥಿನಿಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ

ನವದೆಹಲಿ: ದೇಶದ ಪ್ರತಿಷ್ಠಿತ ರಂಗಭೂಮಿ ತರಬೇತಿ ಕೇಂದ್ರವಾದ ದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯಲ್ಲಿ ವಿದ್ಯಾರ್ಥಿನಿಯೋಬ್ಬರಿಗೆ ಅತಿಥಿ ಶಿಕ್ಷಕರೊಬ್ಬರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾರೆ.  
ವಿದ್ಯಾರ್ಥಿನಿ ದಾಖಲಿಸಿರುವ ಕಿರುಕುಳ ಪ್ರಕರಣದಲ್ಲಿ ಎನ್ ಎಸ್ ಡಿ  ಈ ಅತಿಥಿ ಶಿಕ್ಷಕ ಅಸಂಬದ್ದವಾಗಿ ನಡೆದುಕೊಂಡಿದ್ದಾನೆ ಎಂದು ಹೇಳಲಾಗಿದೆ. ಅಗಸ್ಟ್ 1 ರಂದು ಪೊಲೀಸರು ಅತಿಥಿ ಶಿಕ್ಷಕ ನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ  
ಪ್ರಾಯೋಗಿಕ ಪರೀಕ್ಷೆಯ ಭಾಗವಾಗಿ, ದೃಶ್ಯದ ಬಗ್ಗೆ ನಟಿಸಲು ಅತಿಥಿ ಶಿಕ್ಷಕ ವಿದ್ಯಾರ್ಥಿನಿಗೆ ಕೇಳಿಕೊಂಡಿದ್ದಾನೆ, ಈ ಸಮಯದಲ್ಲಿ ವಿದ್ಯಾರ್ಥಿನಿ ಜೊತೆ ಅಸಂಬದ್ಧವಾಗಿ ನಡೆದುಕೊಂಡಿದ್ದಾನೆ  ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ದೆಹಲಿ ರಾಷ್ಟ್ರೀಯ ನಾಟಕ ಶಾಲೆಯ ಅತಿಥಿ ಶಿಕ್ಷಕರು 62 ವರ್ಷದ ನಿವೃತ್ತ ಪ್ರಾಧ್ಯಾಪಕರಾಗಿದ್ದಾರೆ ಎಂದು ತಿಳಿದುಬಂದಿದೆ.
Share News

About Shaikh BIG TV NEWS, Hubballi

Check Also

ಮ್ಯಾನ್ಮರ್ ಭೂಕಂಪನದಲ್ಲಿ 1700ಕ್ಕೂ ಹೆಚ್ಚು ಮಂದಿ ದುರ್ಮರಣ.!

ಸ್ಪ್ರಿಂಗ್ ರೆವಲ್ಯೂಷನ್ ಮ್ಯಾನ್ಮರ್ ಮುಸ್ಲಿಮ್ ನೆಟ್ ವರ್ಕ್ ಸಮಿತಿಯ ಸದಸ್ಯ ಕುನ್ ಕೀ ಶುಕ್ರವಾರ ಸಂಭವಿಸಿದ ಭೂಕಂಪನದಿಂದ 60 ಮಸೀದಿಗಳು …

Leave a Reply

Your email address will not be published. Required fields are marked *