ಬೆಂಗಳೂರು: ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಜನತಾ ಪರಿವಾರವನ್ನು ಒಗ್ಗೂಡಿಸುವ ಆಶಾಭಾವ ವ್ಯಕ್ತಪಡಿಸಿದ್ದ ಎ.ಎಚ್. ವಿಶ್ವನಾಥ್ ಅವರು ಕಾಂಗ್ರೆಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾತೃ ಪಕ್ಷಕ್ಕೆ ಪುನಃ ಸೇರುವಂತೆ ಆಹ್ವಾನ ನೀಡಿದ್ದಾರೆ.
ಮಂಗಳವಾರ ಜೆಡಿಎಸ್ ಕಚೇರಿಯಲ್ಲಿ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್, “ಜನತಾ ಪರಿವಾರವನ್ನು ಒಗ್ಗೂಡಿಸಬೇಕಿದೆ. ಪಕ್ಷ ಮತ್ತು ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ನಾವೆಲ್ಲರೂ ಒಗ್ಗೂಡಬೇಕಿದೆ. ಹೀಗಾಗಿಯೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುನಃ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಬೇಕು ಎಂದು ಹೇಳಿದ್ದಾರೆ.”
ಸಿದ್ದರಾಮಯ್ಯನವರು ಬೆಳೆದಿದ್ದು ಜನತಾ ಪರಿವಾರದಲ್ಲೇ. ಅವರನ್ನು ಬೆಳೆಸಿದ್ದು ದೇವೇಗೌಡರೇ. ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ ಮಾಡಿದ್ದೂ ಇದೇ ಜೆಡಿಎಸ್. ಹೀಗಾಗಿ ಸಿದ್ದರಾಮಯ್ಯನವರು ಮಾತೃಪಕ್ಷಕ್ಕೆ ಹಿಂದಿರುಗಬೇಕು ಎಂದು ವಿಶ್ವನಾಥ್ ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





