Breaking News

ಹೊಡೆದಳು ನೈಂಟಿ, ಆಮೇಲೆ ಗಂಡಸರ ಜತೆಗೇ ಜಟಾಪಟಿ..

ಕಂಠ ಪುರ್ತಿ ಕುಡಿದ ಮಹಿಳೆಯೊಬ್ಬರು ಬಸ್ ನಿಲ್ದಾಣದಲ್ಲಿ ರಂಪಾಟ ನಡೆಸಿರುವ ಘಟನೆ ಕಳೆದ ರಾತ್ರಿ ನಡೆದಿದೆ. ಹಳೇ ಬಸ್ ನಿಲ್ದಾಣದಲ್ಲಿನ ಪ್ರಯಾಣಿಕರ ಜೊತೆ ಮಹಿಳೆ ಅಸಭ್ಯವಾಗಿ ವರ್ತಿಸಿದ್ದಾಳೆ.  ಮದ್ಯಪಾನ‌ ಮಾಡಿಕೊಂಡು ಬಸ್ ನಿಲ್ದಾಣಕ್ಕೆ ಆಗಮಿಸಿದ್ದ ಮಹಿಳೆ 
ಬಸ್ ನಿಲ್ದಾಣದಲ್ಲಿನ ಸಿಕ್ಕ ಸಿಕ್ಕವರನ್ನು ಥಳಿಸಿ, ಅವಾಚ್ಯವಾಗಿ ನಿಂದಿಸಿದ್ದಾಳೆ.
ನಾನು ಸೆಟ್ಲಮೆಂಟ್ ನಿವಾಸಿ. ಯಾರಿಗೂ ಹೆದರೋಲ್ಲ ಅಂತಾ ಅವಾಜ್ ಹಾಕಿದ್ದಾಳೆ. ಮಹಿಳೆ ವರ್ತನೆಯಿಂದ ಬೆಸತ್ತ ಪ್ರಯಾಣಿಕರು ಪೊಲೀಸರಿಗೆ ಕರೆ ಮಾಡಿದ್ದಾರೆ. ಪೊಲೀಸರು ಆಗಮಿಸುತ್ತಿದಂತೆ ಮಹಿಳೆ ಅಲ್ಲಿಂದ ಕಾಲ್ಕಿತ್ತಿದ್ದಾಳೆ. ರಂಪಾಟ ನಡೆಸಿದ 
ಮಹಿಳೆಯ ಹೆಸರು ತಿಳಿದು ಬಂದಿಲ್ಲ. ಹಳೇ ಬಸ್ ನಿಲ್ದಾಣದಲ್ಲಿ‌ ಇಂತ ಘಟನೆಗಳು  ಪದೇ ಪದೇ ಜರಗುತ್ತಿದ್ದರು ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪ್ರಯಾಣಿಕರು ಆರೋಪಿಸಿದರು.
Share News

About Shaikh BIG TV NEWS, Hubballi

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *