ಧಾರವಾಡದಲ್ಲಿ ಪ್ರತಿಭಟನೆ ಗುತ್ತಿಗೆ ಪೌರ ಕಾರ್ಮಿಕರಿಗೆ ನೇರ ನೇಮಕಾತಿ, ನೇರ ವೇತನ ಪಾವತಿಯಲ್ಲಿ ನೂರಾರು ಕೋಟಿ ಅವ್ಯವಹಾರ ನಡದಿದೆ. ಇದರ ಬಗ್ಗೆ ಲೋಕಾಯುಕ್ತರು ತನಿಖೆ ನಡೆಸಬೇಕೆಂದು ಆಗ್ರಹಿಸಿ ಪೌರಕಾರ್ಮಿಕರು ಧಾರವಾಡದಲ್ಲಿ ಪ್ರತಿಭಟನೆ ನಡಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಎದರು ಪೌರ ಕಾರ್ಮಿಕರು ಪ್ರತಿಭಟನೆ ತಮ್ಮ ಅಸಮಾಧಾನ ಹೊರಹಾಕಿದರು. ಅಲ್ಲದೆ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನೇರ ನೇಮಕಾತಿ ಹಾಗೂ ವೇತನ ಪಾವತಿಯಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆ ಸೂಕ್ತ ತನಿಖೆ ನಡೆಸಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





