ಲೋಕಾಯುಕ್ತ ಪಿ. ವಿಶ್ವನಾಥ ಶೆಟ್ಟಿ
ಬೆಂಗಳೂರು:ದಾವಣಗೆರೆ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿನ ಎರಡು ಸರ್ಕಾರಿ ಶಾಲೆಗಳ ಕಟ್ಟಡ ಶಿಥಿಲಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ್ ಶೆಟ್ಟಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ವಿರುದ್ಧ ಸುಮೊಟೊ ಪ್ರಕರಣ ದಾಖಲಿಸಿದ್ದಾರೆ.
ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಅರಕೆರೆ ಗ್ರಾಮದ ಶಾಲೆ ಮತ್ತು ಬಳ್ಳಾರಿ ಜಿಲ್ಲೆ ಹೊಸಪೇಟೆಯಲ್ಲಿನ ಮುನ್ಸಿಪಲ್ ಪ್ರೌಢಶಾಲೆಯ ಶಿಥಿಲಗೊಂಡ ಕಟ್ಟಡಗಳ ಬಗ್ಗೆ ಪತ್ರಿಕೆಯೊಂದರ ವರದಿ ಪ್ರಕಟಗೊಂಡ ನಂತರ ಲೋಕಾಯುಕ್ತರು ಈ ಕ್ರಮ ಕೈಗೊಂಡಿದ್ದಾರೆ.
ಈ ವಿಚಾರದ ಬಗ್ಗೆ ಉನ್ನತ ಸಂಸ್ಥೆಗಳು ಗಂಭೀರವಾಗಿ ತೆಗೆದುಕೊಂಡು ಕ್ರಮ ಕೈಗೊಳ್ಳಬೇಕು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಶೀಘ್ರದಲ್ಲಿಯೇ ಶಿಥಿಲಗೊಂಡಿರುವ ಕಟ್ಟಡವನ್ನು ದುರಸ್ತಿಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಲೋಕಾಯುಕ್ತರು ನೋಟಿಸ್ ನಲ್ಲಿ ತಿಳಿಸಿದ್ದಾರೆ.
ಈ ಶಾಲೆಗಳು ಯಾವಾಗಲೂ ಬೇಕಾದರೂ ಕುಸಿದು ಬೀಳುವ ಸ್ಥಿತಿಯಲ್ಲಿದ್ದು, 8 ವಾರಗಳೊಳಗೆ ವರದಿ ಸಲ್ಲಿಸುವಂತೆ ಲೋಕಾಯುಕ್ತರು ನಿರ್ದೇಶನ ನೀಡಿದ್ದಾರೆ.
ಬಳ್ಳಾರಿ ಜಿಲ್ಲಾಧಿಕಾರಿ, ಸಿಇಓ, ಮುನ್ಸಿಪಲ್ ಆಡಳಿತದ ನಿರ್ದೇಶಕರು, ಡಿಡಿಪಿಐ, ಬಿಇಓ, ಹಾಗೂ ಶಾಲೆಯ ಪ್ರೀನ್ಸಿಪಾಲ್ ಅವರಿಗೆ ನೋಟಿಸ್ ನೀಡಲಾಗಿದೆ. ಇದಲ್ಲದೇ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಸಾರ್ವಜನಿಕ ಶಿಕ್ಷಣಇಲಾಖೆ ಉಪನಿರ್ದೇಶಕರು, ಜಗಳೂರು ತಾಲೂಕಿನ ಬಿಇಓಗೆ ಲೋಕಾಯುಕ್ತರು ನೋಟಿಸ್ ಜಾರಿಗೊಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





