Breaking News

ಸಂತ್ರಸ್ತರ ನೆರವಿಗೆ ನಿಂತಿರುವುದು ಶ್ಲಾಘನೀಯ: ಸಿದ್ದರಾಮಯ್ಯ

ಮನೆ ಕಳೆದುಕೊಂಡವರಿಗೆ ಮನೆ ಕಟ್ಟಿಕೊಡುವುದು ನಮ್ಮ ಸವಾಲು. 
ಮಡಿಕೇರಿ: ಭಾರಿ ಮಳೆಯಿಂದ ಹಲವಾರು ಊರುಗಳೇ ಹಾಳಾಗಿವೆ. ಜನ ಆಸ್ತಿಪಾಸ್ತಿ ಕಳೆದುಕೊಂಡಿದ್ದಾರೆ. ರಸ್ತೆ ಸಂಪರ್ಕವೂ ಇಲ್ಲದಂತಾಗಿದೆ. ಸಂತ್ರಸ್ತರಿಗೆ ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ. ನೂರಾರು ಮಂದಿ ಸಂತ್ರಸ್ತರ ನೆರವಿಗೆ ನಿಂತಿದ್ದಾರೆ. ಅವರ ಕಾರ್ಯ ಶ್ಲಾಘನೀಯ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಪ್ರವಾಹ ಪೀಡಿತ ಕೊಡಗು ಜಿಲ್ಲೆಯ ಕುಶಾಲನಗರಕ್ಕೆ ಭೇಟಿ ನೀಡಿ ಸಂತ್ರಸ್ತರ ಅಹವಾಲು ಆಲಿಸಿದ ಸಿದ್ದರಾಮಯ್ಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಬಂದು ಪರಿಶೀಲನೆ ನಡೆಸಿದ್ದಾರೆ. ಮಂತ್ರಿಗಳೂ ಭೇಟಿ ನೀಡಿದ್ದಾರೆ. ಮನೆ ಕಳೆದುಕೊಂಡವರಿಗೆ ಮನೆ ಕಟ್ಟಿಕೊಡುವುದು ನಮ್ಮ ಸವಾಲು. ಈ ಸಂಬಂಧ ಯೋಜನೆ ರೂಪಿಸುವಂತೆ ವಸತಿ ಸಚಿವರಿಗೆ ಹೇಳಿದ್ದೇನೆ. ಶಾಲಾ ಮಕ್ಕಳಿಗೂ ನೆರವಾಗಲು ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದರು.ಮುಂದೆ ಈ ರೀತಿ ಅನಾಹುತ ಆಗದಂತೆ ನೋಡಿಕೊಳ್ಳಲು ತಜ್ಞರ ಸಮಿತಿ ರಚನೆ ಆಗಬೇಕು. ಈ ಸಂಬಂಧ ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡುತ್ತೇನೆ. ಸಾವಿರಾರು ಎಕರೆ ಕೃಷಿ ಜಮೀನು ಹಾಳಾಗಿರುವುದರಿಂದ ಕೂಲಿ ಕಾರ್ಮಿಕರಿಗೆ ತೊಂದರೆಯಾಗಿದೆ. ಅವರಿಗೆ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಕೆಲಸ ನೀಡಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಿಗೆ ತಿಳಿಸಿದ್ದೇನೆ.  ಕೃಷಿ ಭೂಮಿ ಕಳೆದುಕೊಂಡವರಿಗೆ ಜಮೀನು ನೀಡುವ ಬಗ್ಗೆಯೂ ಸರ್ಕಾರದ ಜೊತೆ ಮಾತುಕತೆ ನಡೆಸಲಾಗುವುದು. ಸಂತ್ರಸ್ತರಿಗೆ ಪರಿಹಾರ ಒದಗಿಸುವುದು, ಬೆಳೆ ಹಾನಿ ಬಗ್ಗೆಯೂ ಯೋಜನೆ ರೂಪಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.
ಪ್ರಧಾನಿಯವರು ಕೇರಳಕ್ಕೆ ಬಂದಿದ್ದರು. ಇಲ್ಲಿಗೂ ಬಂದು ನೋಡಬೇಕಿತ್ತು. ಈಗಲಾದರೂ ಕೊಡಗಿಗೆ ಭೇಟಿ ನೀಡಿ ಆಗಿರುವ ಹಾನಿ ಪರಿಶೀಲಿಸಿ ಕೇಂದ್ರದಿಂದ ಪರಿಹಾರ ಬಿಡುಗಡೆ ಮಾಡಬೇಕು. ಸರ್ಕಾರ ಪರಿಹಾರ ಕ್ರಮಗಳನ್ನು ಕೈಗೊಂಡಿದೆ. ಅದರ ವೇಗ ಇನ್ನೂ ಹೆಚ್ಚಾಗಬೇಕು. ಮಳೆಯಿಂದ ಹಾನಿಗೊಳಗಾಗಿರುವ ಕೊಡಗಿನಲ್ಲಿ ಮೂಲಭೂತ ಸೌಕರ್ಯಗಳ ಮರು ನಿರ್ಮಾಣ ಆಗಬೇಕು. ಇದಕ್ಕಾಗಿ ಮುಖ್ಯಮಂತ್ರಿ, ಸಂಬಂಧಿಸಿದ ಸಚಿವರೊಂದಿಗೆ ಮಾತುಕತೆ ನಡೆಸುತ್ತೇನೆ. ಸಮನ್ವಯ ಸಮಿತಿ ಸಭೆಯಲ್ಲೂ ಈ ಬಗ್ಗೆ ಚರ್ಚೆ ಮಾಡುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದರು.
Share News

About Shaikh BIG TV NEWS, Hubballi

Check Also

ಮ್ಯಾನ್ಮರ್ ಭೂಕಂಪನದಲ್ಲಿ 1700ಕ್ಕೂ ಹೆಚ್ಚು ಮಂದಿ ದುರ್ಮರಣ.!

ಸ್ಪ್ರಿಂಗ್ ರೆವಲ್ಯೂಷನ್ ಮ್ಯಾನ್ಮರ್ ಮುಸ್ಲಿಮ್ ನೆಟ್ ವರ್ಕ್ ಸಮಿತಿಯ ಸದಸ್ಯ ಕುನ್ ಕೀ ಶುಕ್ರವಾರ ಸಂಭವಿಸಿದ ಭೂಕಂಪನದಿಂದ 60 ಮಸೀದಿಗಳು …

Leave a Reply

Your email address will not be published. Required fields are marked *