Breaking News

ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಭಾಗವಹಿಸಲು ಮೈಸೂರಿಗೆ ಆಗಮಿಸಿದ ಉಪರಾಷ್ಟ್ರಪತಿ

ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡ ಹೂಗುಚ್ಛವನ್ನು ನೀಡಿ ಸ್ವಾಗತಿಸಿದರು.
ಮೈಸೂರು: ಶ್ರೀ ಕ್ಷೇತ್ರ ಸುತ್ತೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರು ಸೋಮವಾರ ಸಂಜೆ ಮೈಸೂರಿಗೆ ಆಗಮಿಸಿದರು.
ಮೈಸೂರಿನ ನಂಜನಗೂಡು ತಾಲೂಕಿನಲ್ಲಿರುವ ಸುತ್ತೂರು ಮಠದಲ್ಲಿ ಇಂದು ನಡೆಯಲಿರುವ ಪರಮಪೂಜ್ಯ ಶ್ರೀ ಜಗದ್ಗುರು ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ ‘103 ನೇ ಜಯಂತಿ ಮಹೋತ್ಸವ’ ಮತ್ತು ಶ್ರೀ ಚನ್ನವೀರ ದೇಶಿಕೇಂದ್ರ ಗುರುಕುಲ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಭಾಗವಹಿಸಲು ಸೋಮವಾರ ಮಂಡಕಳ್ಳಿ ವಿಮಾನ ನಿಲ್ದಾಣದಕ್ಕೆ ಆಗಮಿಸಿದ  ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡ ಹೂಗುಚ್ಛವನ್ನು ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ಉಪಸ್ಥಿತರಿದ್ದರು.
Share News

About Shaikh BIG TV NEWS, Hubballi

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *