Breaking News

ಭಾರತದ ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ ಸಿಂಧು

ಏಷ್ಯನ್ ಕ್ರೀಡಾಕೂಟದಲ್ಲಿ ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಬೆಳ್ಳಿ ಪದಕ ಗೆಲ್ಲುವುದರ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ.
ನವದೆಹಲಿ: ಭಾರತದ ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ ಸಿಂಧು ಏಷ್ಯನ್ ಕ್ರೀಡಾಕೂಟದಲ್ಲಿ ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಬೆಳ್ಳಿ ಪದಕ ಗೆಲ್ಲುವುದರ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ.
ವಿಶ್ವದ ನಂಬರ್ 1 ಆಟಗಾರ್ತಿ ಚೈನೀಸ್ ತೈಪೆಯ ತೈ ಜು ಯಿಂಗ್ ಅವರ ವಿರುದ್ದ ಅಂತಿಮ ಪಂದ್ಯದಲ್ಲಿ 13-21,16-21 ಅಂತರದಲ್ಲಿ ಗೆಲ್ಲುವ ಮೂಲಕ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡರು. ಕೇವಲ 34 ನಿಮಿಷಗಳಲ್ಲಿ ಮುಕ್ತಾಯಗೊಂಡ ಆಟದಲ್ಲಿ ತೈಪೆಯ ಆಟಗಾರ್ತಿ ಎದುರು ಶರಣಾಗುವುದರ ಮೂಲಕ ಸಿಂಧು ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟುಕೊಂಡರು.
ಇದಕ್ಕೂ ಮೊದಲು ಸೈನಾ ನೆಹ್ವಾಲ್ ಕಂಚಿನ ಪದಕವನ್ನು ಗೆದ್ದು ಕೊಂಡಿದ್ದರು. ಆ ಮೂಲಕ ಈ ಆಟಗಾರ್ತಿಯರು ಸೈಯದ್ ಮೋದಿ  ನಂತರ ಏಷ್ಯನ್ ಕ್ರೀಡಾಕೂಟದಲ್ಲಿ ಪದಕವನ್ನು ಗೆದ್ದ ಸಾಧನೆಯನ್ನು ಮಾಡಿದ್ದಾರೆ.
Share News

About Shaikh BIG TV NEWS, Hubballi

Check Also

ಮ್ಯಾನ್ಮರ್ ಭೂಕಂಪನದಲ್ಲಿ 1700ಕ್ಕೂ ಹೆಚ್ಚು ಮಂದಿ ದುರ್ಮರಣ.!

ಸ್ಪ್ರಿಂಗ್ ರೆವಲ್ಯೂಷನ್ ಮ್ಯಾನ್ಮರ್ ಮುಸ್ಲಿಮ್ ನೆಟ್ ವರ್ಕ್ ಸಮಿತಿಯ ಸದಸ್ಯ ಕುನ್ ಕೀ ಶುಕ್ರವಾರ ಸಂಭವಿಸಿದ ಭೂಕಂಪನದಿಂದ 60 ಮಸೀದಿಗಳು …

Leave a Reply

Your email address will not be published. Required fields are marked *