ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಎಸ್ಐಟಿ ಪೊಲೀಸರು ಬೆಳಗಾವಿಯಲ್ಲಿ ಬಂಧಿಸಿದ್ದಾರೆ.
ಬೆಳಗಾವಿ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಎಸ್ಐಟಿ ಪೊಲೀಸರು ಬೆಳಗಾವಿಯಲ್ಲಿ ಬಂಧಿಸಿದ್ದಾರೆ.
ಬೆಳಗಾವಿಯ ಗಣೇಶಪುರದ ನಿವಾಸಿ ಸಾಗರ ಲಾಖೆ(30) ಎಂಬಾತನನ್ನು ಬುಧವಾರ ತಡರಾತ್ರಿ ಎಸ್ಐಟಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈಗಾಗಲೇ ಹತ್ಯೆ ಆರೋಪಿಗಳಿಗೆ ರೆಸಾರ್ಟ್’ನಲ್ಲಿ ಆಶ್ರಯ ನೀಡಿದ ಆರೋಪದ ಮೇಲೆ ಬೆಳಗಾವಿಯಲ್ಲಿ ಭರತ ಕರ್ನೆ ಎಂಬಾತನನ್ನು ಈ ಹಿಂದೆ ಪೊಲೀಸರು ವಶಕ್ಕೆ ಪಡೆದಿದ್ದರು. ಇದೀಗ ಈತನೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಎಂಬ ಆರೋಪದ ಮೇಲೆ ಸಾಗರ ಲಾಖೆ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
2017ರ ಸೆಪ್ಟೆಂಬರ್ 5 ರಂದು ಪತ್ರಕರ್ತೆ, ಸಾಹಿತಿ ಗೌರಿ ಲಂಕೇಶ್ (55) ಅವರ ಮೇಲೆ ರಾತ್ರಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ರಾಜರಾಜೇಶ್ವರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಬೆಂಗಳೂರಿನ ರಾಜರಾಜೇಶ್ವರಿ ನಗರದ ಅವರ ಮನೆಯ ಬಳಿಯೇ ಗುಂಡಿಕ್ಕಿ ಕೊಲ್ಲಲಾಗಿತ್ತು. ಈ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್ಐಟಿ ಗೆ ಆದೇಶಿಸಿತ್ತು. ಅದರಂತೆ ಕಳೆದ 9 ತಿಂಗಳಿನಿಂದ ಎಸ್ಐಟಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





