ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಬಾಕಿ ಉಳಿದಿರುವ 150 ಕೋಟಿ ಪಿಂಚಣಿ ಹಣವನ್ನು ರಾಜ್ಯ ಸರ್ಕಾರ ಬಿಡುಗಡೆ ಹಾಗೂ ಅವಳಿ ನಗರಕ್ಕೆ ಕೇಂದ್ರ ಸರ್ಕಾರ ನೀಡಿದ ಸಿ ಆರ್ ಎಫ್ ಅನುದಾನ ಬಳಕೆ ಮಾಡುವಂತೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಧರಣಿ ನಡೆಸಿದರು.
ನಗರದ ಮಿನಿ ವಿಧಾನ ಸೌಧ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಹಿಂದಿನ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪಾಲಿಕೆಯ 150ಕೋಟಿ ರೂಪಾಯಿ ಹಣವನ್ನು ಬಿಡುಗಡೆ ಮಾಡುವುದಾಗಿ ಹೇಳಿ ಮಾತು ತಪ್ಪಿದೆ. ಹೀಗಿನ ಸಮಿಶ್ರ ಸರ್ಕಾರದ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಕೂಡ ಪಾಲಿಕೆಯ ಪಿಂಚಣಿ ಹಣದ ಕುರಿತು ನಿರ್ಲಕ್ಷ್ಯ ಧೋರಣೆ ಮಾಡುತ್ತಿದ್ದಾರೆ ಎಂದು ದೂರಿದರು. ಅಲ್ಲದೇ ಕೇಂದ್ರ ಸರ್ಕಾರ ಅವಳಿ ನಗರಕ್ಕೆ ಸಿ ಆರ್ ಎಫ್ ಅನುದಾನ ಬಿಡುಗಡೆ ಮಾಡಿದೆ, ಆದ್ರೆ ಆ ಅನುದಾನವನ್ನು ಬಳಕೆ ಮಾಡಿಕೊಳ್ಳದೇ ಅವಳಿನಗರವನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಕೂಡಲೇ ರಾಜ್ಯ ಸರ್ಕಾರ ಮಹಾನಗರ ಪಾಲಿಕೆಯ ಪಿಂಚಣಿ ಹಣ ಹಾಗೂ ಕೇಂದ್ರ ಸರ್ಕಾರ ಅವಳಿನಗಕ್ಕೆ ಬಿಡುಗಡೆ ಮಾಡಿದ ಅನುದಾನ ಬಳಕೆ ಮಾಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





