Breaking News

ಮತ್ತೆ ಗಗನದತ್ತ ಮುಖ ಮಾಡಿದ ಪೆಟ್ರೋಲ್, ಡೀಸೆಲ್ ದರ..

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರ ಮತ್ತೆ ಗಗನದತ್ತ ಮುಖ ಮಾಡಿದ್ದು, ಇಂದು ಮತ್ತೆ ದರ 16 ಪೈಸೆಯಷ್ಟು ಏರಿಕೆಯಾಗಿದೆ.
ಕಳೆದ ಆಗಸ್ಟ್​ 16ರಿಂದಲೂ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಏರಿಕೆಯಾಗುತ್ತಲೇ ಇದ್ದು, 16ನೇ ದಿನವೂ ದರ ಏರಿಕೆಯಾಗಿದೆ. ಇಂದು ಪ್ರತೀ ಲೀಟರ್ ಡೀಸೆಲ್ ದರದಲ್ಲಿ 16 ಪೈಸೆಯಷ್ಟು ಏರಿಕೆಯಾಗಿದ್ದು, ಪೆಟ್ರೋಲ್ ದರದಲ್ಲಿ 36 ಪೈಸೆಯಷ್ಟು ಏರಿಕೆಯಾಗಿದೆ. 
ಬೆಂಗಳೂರಿನಲ್ಲಿ ಇಂದು ಲೀಟರ್​ ಡಿಸೇಲ್​ ದರ ಪ್ರತೀ ಲೀಟರ್ ಗೆ 72.51 ರೂ ಮತ್ತು ಪೆಟ್ರೋಲ್​ ದರ 81.12 ರೂ ಗಳಾಗಿವೆ. ಮುಂಬೈನಲ್ಲಿ ಇಂದಿನ ಪೆಟ್ರೋಲ್​ ಮತ್ತು ಡಿಸೇಲ್​ ಬೆಲೆ ಕ್ರಮವಾಗಿ 86.25, 75.12ರೂ ಗಳಾಗಿವೆ.
ಇನ್ನು ಹಾಲಿ ದರ ಏರಿಕೆಗೆ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಛಾ ತೈಲದಲ್ಲಾದ ಬೆಲೆ ಏರಿಕೆಯೇ ಕಾರಣ ಎಂದು ಕೇಂದ್ರ ಪೆಟ್ರೋಲಿಯಂ ಸಚಿವಾಲಯ ಮಾಹಿತಿ ನೀಡಿದೆ.
Share News

About Shaikh BIG TV NEWS, Hubballi

Check Also

ಮ್ಯಾನ್ಮರ್ ಭೂಕಂಪನದಲ್ಲಿ 1700ಕ್ಕೂ ಹೆಚ್ಚು ಮಂದಿ ದುರ್ಮರಣ.!

ಸ್ಪ್ರಿಂಗ್ ರೆವಲ್ಯೂಷನ್ ಮ್ಯಾನ್ಮರ್ ಮುಸ್ಲಿಮ್ ನೆಟ್ ವರ್ಕ್ ಸಮಿತಿಯ ಸದಸ್ಯ ಕುನ್ ಕೀ ಶುಕ್ರವಾರ ಸಂಭವಿಸಿದ ಭೂಕಂಪನದಿಂದ 60 ಮಸೀದಿಗಳು …

Leave a Reply

Your email address will not be published. Required fields are marked *