ಲಖನೌ: ಉತ್ತರ ಪ್ರದೇಶದಲ್ಲಿ ಎಡಬಿಡದೆ ಸುರಿಯುತ್ತಿರುವ ಮಹಾ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದ್ದು 16 ಮಂದಿ ಸಾವನ್ನಪ್ಪಿದ್ದಾರೆ.
ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯದ ನಾನಾ ಕಡೆ ಪ್ರವಾಹ ಸೃಷ್ಟಿಯಾಗಿದೆ. ಇನ್ನು ಶನಿವಾರ ಹಾಗೂ ಭಾನುವಾರ ಪ್ರವಾಹದಿಂದಾಗಿ 16 ಮಂದಿ ಮೃತಪಟ್ಟಿದ್ದು 12 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ರಾಜ್ಯದಲ್ಲಿ ಎರಡು ದಿನಗಳ ಕಾಲ ಮಳೆ ಸುರಿಯಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಇನ್ನು ಇಂದು ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ ಐಎಎಫ್ ಸಿಬ್ಬಂದಿ ಲಲಿತ್ಪುರ್ಮತ್ತು ಜಾನ್ಸಿಯಲ್ಲಿ ಸಿಕ್ಕಿ ಹಾಕಿಕೊಂಡಿದ್ದ 14 ಮಂದಿಯನ್ನು ರಕ್ಷಿಸಿದ್ದಾರೆ.
ಜಲ ಪ್ರಳಯಕ್ಕೆ ನೂರಾರು ಪ್ರಾಣಿಗಳು ಮೃತಪಟ್ಟಿದ್ದು 461ಕ್ಕೂ ಹೆಚ್ಚು ಮನೆಗಳು ಕುಸಿದಿವೆ. ಮಹಾ ಮಳೆಯಿಂದಾಗಿ ಜಲಾಶಯಗಳೆಲ್ಲಾ ಉಕ್ಕಿ ಹರಿಯುತ್ತಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





