Breaking News

ಸೆಪ್ಟಿಕ್ ಟ್ಯಾಂಕ್ ನಲ್ಲಿ ಉಸಿರುಗಟ್ಟಿ ಐವರ ಸಾವು.

ನವದೆಹಲಿ: ಒಡಿಸ್ಸಾದ ರಾಯಘಡ್ ಜಿಲ್ಲೆಯಲ್ಲಿ ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸಲು ಇಳಿದಿದ್ದ ಐವರು ಪೌರ ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.
ಈ ಘಟನೆ ದುರ್ಗಿಯ ಬಿಸ್ಸಾಂ ಕಟಕ್ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸಲು ಮಹಿಳಾ ಪೌರ ಕಾರ್ಮಿಕಳೋಬ್ಬಳು ಇಳಿದಿದ್ದು ಅವಳು ಬರದೆ ಇರುವುದನ್ನು ಕಂಡು ಮತ್ತಿಬ್ಬರು ಇಳಿದಿದ್ದಾರೆ, ಇದಾದ ನಂತರ ಈ ಮೂವರು ಹೊರ ಬರದೆ ಇದ್ದಾಗ ಅಲ್ಲೇ ಹತ್ತಿರದಲ್ಲಿ ಪುಟ್ಬಾಲ್ ಆಡುತ್ತಿದ್ದ ಮೂವರು ಯುವಕರು ಕೂಡ ಟ್ಯಾಂಕ್ ಗೆ ಇಳಿದಿದ್ದಾರೆ.ಆಗ ಯಾರು ಹೊರಬರದೆ ಅವರಲ್ಲಿ ಐವರು ಮೃತಪಟ್ಟಿದ್ದಾರೆ.ಅದರಲ್ಲಿ  ಕಾರ್ತಿಕ ಗೌಡ ಎನ್ನುವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.ಆದರೆ ಆ ವ್ಯಕ್ತಿ ಇನ್ನು ಜೀವನ್ಮರಣದ ನಡುವೆ ಹೋರಾಟ ನಡೆಸಿದ್ದಾನೆ.
ಇತ್ತ ಒಡಿಸ್ಸಾದ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಮೃತ ಕುಟುಂಬಗಳಿಗೆ 2 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ.ಜಿಲ್ಲಾ ಆಡಳಿತ ರೆಡ್ ಕ್ರಾಸ್ ನಿಧಿ ಅಡಿಯಲ್ಲಿ 10 ಸಾವಿರ ರೂಪಾಯಿಗಳನ್ನು ಘೋಷಿಸಿದೆ.
Share News

About Shaikh BIG TV NEWS, Hubballi

Check Also

ಮ್ಯಾನ್ಮರ್ ಭೂಕಂಪನದಲ್ಲಿ 1700ಕ್ಕೂ ಹೆಚ್ಚು ಮಂದಿ ದುರ್ಮರಣ.!

ಸ್ಪ್ರಿಂಗ್ ರೆವಲ್ಯೂಷನ್ ಮ್ಯಾನ್ಮರ್ ಮುಸ್ಲಿಮ್ ನೆಟ್ ವರ್ಕ್ ಸಮಿತಿಯ ಸದಸ್ಯ ಕುನ್ ಕೀ ಶುಕ್ರವಾರ ಸಂಭವಿಸಿದ ಭೂಕಂಪನದಿಂದ 60 ಮಸೀದಿಗಳು …

Leave a Reply

Your email address will not be published. Required fields are marked *