ನವದೆಹಲಿ:ಪಂಜಾಬ್ ನ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಹೇಳುವಂತೆ ಸದ್ಯದ ಸ್ಥಿತಿ ನೋಡುವುದಾದರೆ ರಾಹುಲ್ ಗಾಂಧಿ ದೇಶದ ಮುಂದಿನ ಪ್ರಧಾನಿಯಾಗುತ್ತಾರೆ ಎಂದು ವಿಶ್ವಾಸವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು “ಈಗಿನ ದೇಶದ ಸ್ಥಿತಿ ನೋಡುವುದಾದರೆ ರಾಹುಲ್ ಗಾಂಧಿ ಖಂಡಿತ 2019ರ ಚುನಾವಣೆಯಲ್ಲಿ ಪ್ರಧಾನಮಂತ್ರಿಯಾಗುತ್ತಾರೆ ಎಂದು ಅಮರಿಂದರ್ ಸಿಂಗ್ ತಿಳಿಸಿದರು. ಇನ್ನು ಮುಂದುವರೆದು ಕಾಂಗ್ರೆಸ್ ಪಕ್ಷವು ಒಗ್ಗಟ್ಟಿನಿಂದಿದ್ದು ಎಲ್ಲ ರೀತಿಯಿಂದಲೂ ಅವರಿಗೆ ಬೆಂಬಲವಾಗಿದೆ ಎಂದು ಅವರು ತಿಳಿಸಿದರು.
ಈ ಹಿಂದೆ ಅಮರಿಂದರ್ ಸಿಂಗ್ ಜಂಟಿ ವಿರೋಧಿ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯಾಗಲು ಬೆಂಬಲ ವ್ಯಕ್ತಪಡಿಸಿದ್ದರು.ಅವರು ಹೇಳುವಂತೆ ರಾಹುಲ್ ದೇಶವನ್ನು ಮುನ್ನಡೆಸಲು ಸಂಪೂರ್ಣವಾಗಿ ಶಕ್ತರಾಗಿದ್ದಾರೆಂದು ಅವರು ಅಭಿಪ್ರಾಯಪಟ್ಟಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





