ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯನ್ನು ಖಂಡಿಸಿ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿನೂತನ ಪ್ರತಿಭಟನೆ ನಡೆಸಿದರು.
ನಗರದ ಕೆಇಸಿ ವೃತ್ತದಿಂದ ವಿಮಾನ ನಿಲ್ದಾಣದವರೆಗೆ ಎತ್ತಿನ ಬಂಡೆಯಲ್ಲಿ ಮೆರವಣಿಗೆ ಮಾಡುವ ಮೂಲಕ ಕೇಂದ್ರ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡೆಸಿದರು.
ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ಭಾಷಣ ಮಾಡಿ ಪುಕ್ಕಟೆ ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು.
ಈ ವೇಳೆ ಮಾತನಾಡಿದ ದಿನೇಶ ಗುಂಡೂರಾವ್,
ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆಯಿಂದ ಜನ ಸಾಮಾನ್ಯರು ಪರದಾಡುತ್ತಿದ್ದಾರೆ. ವಿದೇಶದಲ್ಲಿ ಕಚ್ಚಾ ತೈಲ ಬೆಲೆ ಕಡಿಮೆ ಇದ್ದಾಗಲು ದೇಶದಲ್ಲಿ ತೈಲ ಬೆಲೆ ಕಡಿಮೆ ಮಾಡಲಿಲ್ಲ. ಹೀಗಾಗಿ ಸಾಮಾನ್ಯ ಜನರು ಬದುಕು ನಡೆಸುವುದು ಕಷ್ಟವಾಗಿದೆ. ಪೆಟ್ರೋಲ್, ಡಿಸೇಲ್ ಜಿ ಎಸ್ ಟಿ ವ್ಯಾಪ್ತಿಗೆ ತರಬೇಕು ಎಂದು ಒತ್ತಾಯಿಸಿದರು.
ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುತ್ತೇವೆ. ಬಿಜೆಪಿ ನಾಯಕರು ಈ ಮೈತ್ರಿ ಸರ್ಕಾರ ಪತನವಾಗುತ್ತೇ ಅಂತಾ ಹಗಲು ಕನಸು ಕಾಣುತ್ತಿದ್ದಾರೆ. ಆದ್ರೆ ಈ ಸರ್ಕಾರ ಐದು ವರ್ಷ ಆಡಳಿತ ನಡೆಸುವದು ಗ್ಯಾರಂಟಿ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





