Breaking News

ಉತ್ತರ ಪ್ರದೇಶ: ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ವಿದ್ಯಾರ್ಥಿನಿ ಮನೆಗೇ ನುಗ್ಗಿ ಕುಕೃತ್ಯ, ಅತ್ಯಾಚಾರದ ಬಳಿಕ ಮನೆ ಲೂಟಿ ಮಾಡಿದ ದುಷ್ಕರ್ಮಿಗಳು

ಉತ್ತರ ಪ್ರದೇಶದ ಘಾಜಿಯಾಯಾಬಾದ್  ಕಾಕ್ರಾ ಎಂಬ ಗ್ರಾಮದಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದ್ದು, ರಾತ್ರಿ ಎಲ್ಲರೂ ಮಲಗಿದ್ದ ಸಂದರ್ಭದಲ್ಲಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ಮಾರಕಾಸ್ತ್ರಗಳನ್ನು ತೋರಿಸಿ ಕುಟುಂಬಸ್ಥರನ್ನು ಒತ್ತೆಯಾಳುಗಳಾಗಿರಿಸಿಕೊಂಡಿದ್ದಾರೆ. ಬಳಿಕ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. 
ಬಳಿಕ ಮನೆಯಲ್ಲಿದ್ದ ಚಿನ್ನಾಭರಣ ಮತ್ತು ಹಣವನ್ನು ದುಷ್ಕರ್ಮಿಗಳು ಹೊತ್ತೊಯ್ದಿದ್ದು, ಪೊಲೀಸ್ ದೂರು ನೀಡಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ಪರಾರಿಯಾಗಿದ್ದಾರೆ. 
ಈ ಬಗ್ಗೆ ಮಾಹಿತಿ ನೀಡಿರುವ ಘಾಜಿಯಾಬಾದ್ ಡಿವೈಎಸ್ ಪಿ ಪ್ರಭಾತ್ ಕುಮಾರ್ ಅವರು, ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿದ್ದೇವೆ. ಯುವತಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಅಂತೆಯೇ ಸುತ್ತಮುತ್ತಲ ಪ್ರದೇಶಗಳನ್ನು ಪರಿಶೀಲನೆ ನಡೆಸಿದ್ದೇವೆ. ಈ ಸಂಬಂಧ ಎಫ್ ಐಆರ್ ಕೂಡ ದಾಖಲಾಗಿದೆ ಎಂದು ಹೇಳಿದ್ದಾರೆ
Share News

About Shaikh BIG TV NEWS, Hubballi

Check Also

ಮ್ಯಾನ್ಮರ್ ಭೂಕಂಪನದಲ್ಲಿ 1700ಕ್ಕೂ ಹೆಚ್ಚು ಮಂದಿ ದುರ್ಮರಣ.!

ಸ್ಪ್ರಿಂಗ್ ರೆವಲ್ಯೂಷನ್ ಮ್ಯಾನ್ಮರ್ ಮುಸ್ಲಿಮ್ ನೆಟ್ ವರ್ಕ್ ಸಮಿತಿಯ ಸದಸ್ಯ ಕುನ್ ಕೀ ಶುಕ್ರವಾರ ಸಂಭವಿಸಿದ ಭೂಕಂಪನದಿಂದ 60 ಮಸೀದಿಗಳು …

Leave a Reply

Your email address will not be published. Required fields are marked *