Breaking News

ಕನ್ನಡಿಗರ ಒತ್ತಡಕ್ಕೆ ಮಣಿದ ಕೇಂದ್ರ ಸರ್ಕಾರ, ಬೆಂಗಳೂರಿನಲ್ಲೇ ಏರ್ ಷೋ ಫಿಕ್ಸ್ !

ಬೆಂಗಳೂರು: ಕನ್ನಡಿಗರ ಒತ್ತಡಕ್ಕೆ ಮಣಿದಿರುವ ಕೇಂದ್ರ ಸರ್ಕಾರ ಈಗ ಏಷ್ಯಾದ ಅತಿ ದೊಡ್ಡ ವಿಮಾನ ಪ್ರದರ್ಶನವನ್ನು ಬೆಂಗಳೂರಿನಲ್ಲೇ ನಡೆಸಲು ತಿರ್ಮಾನಿಸಿದೆ.
ಈ ಕುರಿತಾಗಿ ಪ್ರಕಟನೆ ಹೊರಡಿಸಿರುವ ಸರ್ಕಾರ ” ಸರ್ಕಾರ ಏರೋ ಇಂಡಿಯಾ 2019ರ ಕಾರ್ಯಕ್ರಮವನ್ನು ಫೆಬ್ರುವರಿ 20ರಿಂದ 24ರವರೆಗೆ ಬೆಂಗಳೂರಿನಲ್ಲೆ ನಡೆಸಲು ತಿರ್ಮಾನಿಸಿದೆ.ಈ ಐದು ದಿನಗಳ ಈ ಏರ್ ಷೋ ಕಾರ್ಯಕ್ರಮವು ರಕ್ಷಣೆ ಮತ್ತು ವಿಮಾನಕ್ಕೆ ಸಂಬಂಧಿಸಿದ ಪ್ರದರ್ಶನವನ್ನು ಒಳಗೊಂಡಿರುತ್ತದೆ” ಎಂದು ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.
ಕಳೆದ ತಿಂಗಳು ಉತ್ತರ ಪ್ರದೇಶದ ಲಕ್ನೋಗೆ ಈ ಏರ್ ಷೋ ಶಿಫ್ಟ್ ಆಗಲಿದೆ ಎನ್ನುವ ಊಹಾಪೋಹ ಹಬ್ಬಿಕೊಂಡಿತ್ತು .ಇದಕ್ಕೆ ಪೂರಕವೆನ್ನುವಂತೆ ಯೋಗಿ ಸರ್ಕಾರವು ಸಹಿತ ಯುಪಿಯಲ್ಲಿ ನಡೆಸಲು ರಕ್ಷಣಾ ಮಂತ್ರಿ ನಿರ್ಮಲಾ ಸಿತಾರಾಮನ್ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದರು.
ಆದರೆ ಪ್ರತಿ ವರ್ಷ ಬೆಂಗಳೂರಿನಲ್ಲಿ ನಡೆಯುತ್ತಿದ್ದ ಈ ಏರ್ ಷೋವನ್ನು ಬೇರೆಡೆ ಸ್ಥಳಾಂತರಿಸುವುದಕ್ಕೆ ಕರ್ನಾಟಕದಿಂದ ಭಾರಿ ವಿರೋಧ ವ್ಯಕ್ತವಾಗಿತ್ತು.ಈ ಹಿನ್ನಲೆಯಲ್ಲಿ ಈಗ ಕನ್ನಡಿಗರ ಒತ್ತಡಕ್ಕೆ ಮಣಿದು ಕೇಂದ್ರ ಸರ್ಕಾರ ಈಗ ಏರ್ ಷೋವನ್ನು ಬೆಂಗಳೂರಿನಲ್ಲೇ ನಡೆಸಲು ತಿರ್ಮಾನಿಸಿದೆ.
Share News

About Shaikh BIG TV NEWS, Hubballi

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *