Breaking News

ಜೆಡಿಎಸ್ ಕಾರ್ಯಕರ್ತರ ವಿರುದ್ಧ ದೂರು

ಹುಬ್ಬಳ್ಳಿ:- ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಇದೇ ಸೆ. 10 ರಂದು ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಕರೆ ನೀಡಿದ್ದ, ಭಾರತ್ ಬಂದ್ ವೇಳೆ ಧಾರವಾಡ ಸಂಸದ ಪ್ರಲ್ಹಾದ ಜೋಶಿ ಅವರ ಹುಬ್ಬಳ್ಳಿ ಕಚೇರಿಗೆ ಮುತ್ತಿಗೆ ಹಾಕಿದ ಜೆಡಿಎಸ್ ಕಾರ್ಯಕರ್ತರ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ‌. 
ಮಹಾನಗರ ಬಿಜೆಪಿ ಜಿಲ್ಲಾಧ್ಯಕ್ಷ ನಾಗೇಶ ಕಲಬುರ್ಗಿ ಅವರು ಹುಬ್ಬಳ್ಳಿ ಉಪನಗರ ಠಾಣೆಯಲ್ಲಿ ಸಂಸದರ ಕಚೇರಿಗೆ ಮುತ್ತಿಗೆ ಹಾಕಿದ ಜೆಡಿಎಸ್ ಕಾರ್ಯಕರ್ತರ ವಿರುದ್ಧ ದೂರು ದಾಖಲಿಸಿದ್ದಾರೆ. ಜೆಡಿಎಸ್ ಪಾಲಿಕೆ ಸದಸ್ಯ ರಾಜನ್ ಕೊರವಿ ಹಾಗೂ ಪಕ್ಷದ ಕಾರ್ಯರ್ತ ನವೀನ ಮುನಿಯಪ್ಪನವರ ಸೇರಿದಂತೆ ೩೦ ಕಾರ್ಯಕರ್ತರ ವಿರುದ್ಧ ದೂರು ದಾಖಲಿಸಿದ್ದಾರೆ. ಕಚೇತಿಗೆ ಮುತ್ತಿಗೆ ಹಾಕಿ ಸಂಸದ ಪ್ರಹ್ಲಾದ ಜೋಶಿ ವಿರುದ್ಧ ಧಿಕ್ಕಾರ ಕೂಗಿ, ಅವಾಚ್ಚ ಶಬ್ದಗಳ ಘೋಷಣೆ ಹಾಕಿದ್ದರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
Share News

About Shaikh BIG TV NEWS, Hubballi

Check Also

ಗಸ್ತು ಪೊಲೀಸರ ಮೇಲೆ ದಾಳಿ: ಕಾನೂನಿಗೆ ಸವಾಲು ಹಾಕಿದ ದುಷ್ಕರ್ಮಿಗಳು!

ಪೊಲೀಸರೇ ಸುರಕ್ಷಿತ ಅಲ್ಲವಾ..? ಹುಬ್ಬಳ್ಳಿಯಲ್ಲಿ ಗೂಂಡಾಗಿರಿ ಮಿತಿ ಮೀರಿ! ಸ್ಮಶಾನದಲ್ಲೇ ದಾಳಿ: ಪೊಲೀಸರ ಮೇಲೆ ಚಾಕು ನಗರದಲ್ಲಿ ಭೀತಿ! ಕರ್ತವ್ಯದಲ್ಲಿದ್ದ …

Leave a Reply

Your email address will not be published. Required fields are marked *