ಹುಬ್ಬಳ್ಳಿಯಲ್ಲಿ
ಮೈತ್ರಿ ಸರ್ಕಾರದಲ್ಲಿ ಯಾವುದೇ ಭಿನ್ನಮತವಿಲ್ಲ. ಯಾವ ಶಾಸಕರು ಬಿಜೆಪಿಗೆ ಹೋಗಲ್ಲ ಎಂದು ಸಚಿವ ಜಮೀರ್ ಅಹ್ಮದ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು,
ಐದು ವರ್ಷಗಳ ಕಾಲ ಮೈತ್ರಿ ಸರ್ಕಾರ ಮುಂದುವರೆಯಲಿದೆ. ಯಾವ ಶಾಸಕರಲ್ಲೂ ಅಸಮಾಧಾನ ಇಲ್ಲ. ಮೈತ್ರಿ ಸರ್ಕಾರ ರಚನೆಯಾದಾಗಿನಿಂದಲೂ ಸರ್ಕಾರ ಬೀಳಿಸುವ ಪ್ರಯತ್ನ ನಡೆಯುತ್ತಿದೆ ಎಂದರು. ಬಿಜೆಪಿಯವರು ಸರ್ಕಾರ ರಚನೆಯ ಹಗಲು ಕನಸು ಕಾಣುತ್ತಿದ್ದಾರೆ. ಆದ್ರೆ ಅವರಿಗೆ ಫಲ ಸಿಗುವುದಿಲ್ಲ. ಮೈತ್ರಿ ಸರ್ಕಾರ ಯಾವುದೇ ಕಾರಣಕ್ಕೂ ಬೀಳುವುದಿಲ್ಲ ಐದು ವರ್ಷ ಮುಂದುವರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಜಮೀರ್ ಅಹ್ಮದ್, ಸಚಿವ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ
bigtvnews | Hubli Dharwad News | Kannada News | Karnataka News Hubli News | News In Hubli | Local news




